ಬೆಂಗಳೂರು: (೩೧) ರಾಜ್ಯದಲ್ಲಿ ಮದ್ಯಪಾನವನ್ನು ಸಂಪೂರ್ಣ ನಿಷೇಧ ಮಾಡುವ ಕುರಿತು ಪರಿಶೀಲಿಸಲು ಸಮಯಾವಕಾಶದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಹಿರಿಯ ರಂಗಕರ್ಮಿ, ಪ್ರಸನ್ನ ಅವರ ನೇತೃತ್ವದಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಮದ್ಯಪಾನ ನಿಷೇಧ ಹೋರಾಟಗಾರರ ಜೊತೆಗೆ ಮಾತನಾಡಿದ ಅವರು, ಹಿಂದೆ ತಾನು ಮುಖ್ಯಮಂತ್ರಿಯಾಗಿದ್ದಾಗ ಸಾರಾಯಿ ಮತ್ತು ಲಾಟರಿ ನಿಷೇಧಿಸಿದ್ದನ್ನು ಸ್ಮರಿಸಿದರು.
ರಾಜ್ಯದಲ್ಲಿ ಪ್ರಸ್ತುತ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ. ಮಿತ್ರಪಕ್ಷಗಳೊಂದಿಗೆ ಸಮಾಲೋಚನೆ ನಡೆಸದೆ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಅಲ್ಲದೆ ಜಿ ಎಸ್ ಟಿ ಜಾರಿಗೆ ಬಂದ ನಂತರ ರಾಜ್ಯ ಸರ್ಕಾರಕ್ಕೆ ಸಂಪನ್ಮೂಲ ಕ್ರೋಢೀಕರಣದ ಅವಕಾಶಗಳು ಸೀಮಿತವಾಗಿವೆ ಎಂದು ಅವರು ಹೋರಾಟಗಾರರಿಗೆ ತಿಳಿಸಿದರು.
ಈ ವಿಷಯದ ಕುರಿತು ಉನ್ನತ ಮಟ್ಟದ ಚರ್ಚೆ ನಡೆಸುವುದು ಅಗತ್ಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಮದ್ಯಪಾನ ಸಂಪೂರ್ಣ ನಿಷೇಧವನ್ನು ಏಕಾಏಕಿ ಘೋಷಿಸಲಾಗದು. ಇದರ ಸಾಧಕ ಬಾಧಕಗಳನ್ನು ಪರಿಶೀಲಿಸಲು ಸಮಯಾವಕಾಶದ ಅಗತ್ಯವಿದೆ ಎಂದು ಅವರು ಸ್ಪಷ್ಟಪಡಿಸಿದರು.
No comments:
Post a Comment