ABC

Tuesday, 26 February 2019

ಅನ್ನದಾತರಿಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟ ಕುಮಾರಸ್ವಾಮಿಯವರು ಕೆಲವೇ ದಿನಗಳಲ್ಲಿ 10 ಸಾವಿರ ಕೋಟಿ ರೂ. ಸಾಲ ಮನ್ನಾ.

ಸಕಲೇಶಪುರ: ಮಾರ್ಚ್ ಅಂತ್ಯದೊಳಗೆ ಸುಮಾರು 10 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡುವ ಗುರಿ ಹೊಂದಿದ್ದು, ಇದರಲ್ಲಿ ಈಗಾಗಲೇ 4,130 ಕೋಟಿ ರೂ. ಬಿಡುಗಡೆ ಆಗಿದೆ ಎಂದು ಸಿಎಂ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಸರಕಾರ ಅನ್ನದಾತನ ಪರವಾಗಿದ್ದು, ರೈತರು ಆತಂಕಕ್ಕೊಳಗಾಗಿ ದುಡುಕಿನ ನಿರ್ಧಾರ ತೆಗೆದುಕೊಳ್ಳುವುದು ಬೇಡ ಎಂದು ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಮನವಿ ಮಾಡಿದರು.


ಸಿಎಂ ಕುಮಾರಸ್ವಾಮಿ ಅವರು ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿ ಮಂಗಳವಾರ ನಡೆದ ಎತ್ತಿನಹೊಳೆ ಯೋಜನೆಯ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.

ತಲೆ ತಲಾಂತರದಿಂದ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿರುವ ರೈತರಿಗೆ ಅನ್ಯಾಯವಾಗಲು ನಮ್ಮ ಸರಕಾರ ಬಿಡುವುದಿಲ್ಲ. ಮಾರ್ಚ್‌ ಅಂತ್ಯದೊಳಗೆ ಸುಮಾರು ಹತ್ತು ಸಾವಿರ ಕೋಟಿ ಸಾಲ ಮನ್ನಾ ಮಾಡುವ ಗುರಿ ಹೊಂದಿದೆ. ಇದರಲ್ಲಿ ಈಗಾಗಲೇ ಸುಮಾರು 4,130 ಕೋಟಿ ರೂ. ಬಿಡುಗಡೆಯಾಗಿದೆ. ಇದು 6.40 ಲಕ್ಷ ಕುಟುಂಬಗಳಿಗೆ ಸಂದಾಯ ಆಗಿದೆ' ಎಂದು ಕುಮಾರಸ್ವಾಮಿ ತಿಳಿಸಿದರು.
ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡ ಮಾತನಾಡಿ, 'ರೈತರ ಮನೆಯ ರಾಜ್ಯ ಸರಕಾರದಿಂದ ರೈತರಿಗೆ ಯಾವುದೆ ಅನ್ಯಾಯ ಆಗುವುದಿಲ್ಲ ಎಂಬ ವಿಶ್ವಾಸ ಇದೆ. ಯಾರೂ ಹೆದರುವ ಅಗತ್ಯ ಇಲ್ಲ. ಗ್ರಾಮೀಣ ರಸ್ತೆಗಳು, ಕುಡಿಯುವ ನೀರು ಇನ್ನಿತರೆ ಅವಶ್ಯಕತೆಗಳಿದ್ದರೆ ಮನವಿ ಸಲ್ಲಿಸಲಾಗುವುದು' ಎಂದರು.

ನೆಟ್ವರ್ಕ್ ಕಂಪನಿ:
https://play.google.com/store/apps/details?id=com.application.onead&referrer=GFN1E0 Sign up with OneAD app. You can earn up to 2.5 L monthly OneAD Balance. Your referral code for registration is GFN1E0 . Register today

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...