ಬೆಂಗಳೂರು: ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳ ಆರಂಭಕ್ಕೆ ಸಾಹಿತ್ಯ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿರುವ ಬೆನ್ನಲ್ಲೇ 224 ವಿಧಾನಸಭಾ ಕ್ಷೇತ್ರಗಳ ಲೆಕ್ಕಾಚಾರದಲ್ಲಿ ಪ್ರತಿ ಕ್ಷೇತ್ರಕ್ಕೆ ತಲಾ ನಾಲ್ಕು ಶಾಲೆಗಳ ಆಯ್ಕೆ ಪ್ರಕ್ರಿಯೆಗೆ ಶಿಕ್ಷಣ ಇಲಾಖೆ ಚಾಲನೆ ನೀಡಿದೆ. ಮುಂದಿನ 4 ವರ್ಷಗಳಲ್ಲಿ ಒಂದು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸುವುದಾಗಿ ಬಜೆಟ್ನಲ್ಲಿ ಘೋಷಿಸಿರುವಂತೆ 1ರಿಂದ 12ನೇ ತರಗತಿಯವರೆಗೆ ಒಂದೇ ಸೂರಿನಡಿ ಕರ್ನಾಟಕ ಪಬ್ಲಿಕ್ ಶಾಲೆ ಹೆಸರಲ್ಲಿ ಆರಂಭಿಸಲು ಇತ್ತೀಚೆಗೆ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು.
ಕ್ಷೇತ್ರಕ್ಕೆ 4ರಂತೆ ಲೆಕ್ಕ ಹಾಕಿದಾಗ ರಾಜ್ಯಾದ್ಯಂತ ಒಟ್ಟು 896 ಶಾಲೆಗಳಾಗಲಿವೆ. 1 ಸಾವಿರ ಶಾಲೆಗಳಿಗೆ 104 ಕೊರತೆ ಆಗುವುದರಿಂದ ಕೆಲವು ಕ್ಷೇತ್ರಗಳಲ್ಲಿ ಹೆಚ್ಚಿನ ಶಾಲೆ ತೆರೆದು ಸರಿದೂಗಿಸಲು ನಿರ್ಧರಿಸಲಾಗಿದೆ.ಕಳೆದ 1 ವರ್ಷದಿಂದಲೇ ರಾಜ್ಯದಲ್ಲಿ 275 ಕರ್ನಾಟಕ ಪಬ್ಲಿಕ್ ಶಾಲೆ ಕಾರ್ಯನಿರ್ವಹಿಸುತ್ತಿವೆ. ಕಳೆದ ವರ್ಷ ಆಯ್ಕೆ ಮಾಡುವಾಗ ಕೆಲವು ವಿಧಾನಸಭಾ ಕೇತ್ರದ ಶಾಸಕರು ತಮ್ಮ ವ್ಯಾಪ್ತಿಗೆ ಕಡಿಮೆ ಶಾಲೆಗಳು ಬಂದಿವೆ ಎಂದು ಗಲಾಟೆ ಮಾಡಿದ್ದರು.
ಇದೀಗ ಮೈತ್ರಿ ಸರ್ಕಾರ ಅಧಿಕಾರದಲ್ಲಿರುವುದರಿಂದ ಎಲ್ಲ ಶಾಸಕರನ್ನು ಗಣನೆಗೆ ತೆಗೆದುಕೊಳ್ಳುವುದು ಮುಖ್ಯಮಂತ್ರಿ ಹಾಗೂ ಪ್ರಾಥಮಿಕ ಪ್ರೌಢ ಶಿಕ್ಷಣ ಸಚಿವರೂ ಆಗಿರುವ ಎಚ್.ಡಿ.ಕುಮಾರಸ್ವಾಮಿಗೆ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕರ ಸಮಾಧಾನಕ್ಕೆ ಹಾಗೂ ಸಾರ್ವಜನಿಕರಿಗೆ ಸಮಾನವಾಗಿ ಶಾಲೆ ಹಂಚಿಕೆ ಮಾಡಲು ಶಿಕ್ಷಣ ಇಲಾಖೆ ಪ್ರತಿ ಕ್ಷೇತ್ರಕ್ಕೆ 4 ಶಾಲೆ ಆಯ್ಕೆ ಮಾಡಲು ನಿರ್ಧರಿಸಿದೆ.

No comments:
Post a Comment