ಬಾಲಗಂಗಾಧರ ನಾಥ ಸ್ವಾಮೀಜಿ ಹಾಗೂ ಶಿವಕುಮಾರಸ್ವಾಮೀಜಿಯವರ ಹುಟ್ಟೂರುಗಳಲ್ಲಿ ವಿಶ್ವದರ್ಜೆಯ ಸಾಂಸ್ಕೃತಿಕ ಮತ್ತು ಪಾರಂಪರಿಕ ಕೇಂದ್ರ ಸ್ಥಾಪನೆಗೆ ತಲಾ 25 ಕೋಟಿ ರೂ.ಗಳ ಅನುದಾನ ಮೀಸಲಿರಿಸಲಾಗಿದೆ.
ಸಿದ್ದಗಂಗಾ ಮಠದ ಶ್ರೀ ಶಿವಕುಮಾರಸ್ವಾಮೀಜಿಯವರ ಹುಟ್ಟೂರಾದ ರಾಮನಗರ ಜಿಲ್ಲೆಯ ವೀರಾಪುರ ಗ್ರಾಮದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ವಿಶ್ವದರ್ಜೆಯ ಸಾಂಸ್ಕøತಿಕ ಹಾಗೂ ಪಾರಂಪರಿಕ ಕೇಂದ್ರ ಸ್ಥಾಪನೆಗೆ ಬಜೆಟ್‍ನಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಅದೇ ರೀತಿ ಬಾಲಗಂಗಾಧರನಾಥ ಸ್ವಾಮೀಜಿಯವರ ಜನ್ಮಸ್ಥಳವಾದ ಬಾಣಂದೂರು ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಅಭಿವೃದ್ಧಿ ಪಡಿಸಲು ಹಾಗೂ ಶ್ರೀಗಳ ಜೀವನ, ಸಾಧನೆ ಮತ್ತು ವಿಚಾರಗಳನ್ನು ಸಾರಲು 25 ಕೋಟಿ ರೂ.ವೆಚ್ಚದಲ್ಲಿ ಪಾರಂಪರಿಕ ಕೇಂದ್ರ ಸ್ಥಾಪನೆ ಮಾಡಲಾಗುತ್ತಿದೆ.
ನಾಡ ಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ 5 ಕೋಟಿ, ಕೊಡವ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ 10 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ.
ಜಾನಪದ ಕಲಾವಿದರು ಹಾಗೂ ಕಲೆಗಳಿಗೆ ಉತ್ತೇಜನ ನೀಡಲು ಜಾನಪದ ಜಾತ್ರೆ ಕಾರ್ಯಕ್ರಮಕ್ಕೆ ಮರುಚಾಲನೆ ನೀಡುವುದರ ಜೊತೆಗೆ ಎಲ್ಲಾ ಜಿಲ್ಲೆಗಳಲ್ಲಿ ಜಾತ್ರೆ ಏರ್ಪಡಿಸಲು 2 ಕೋಟಿ ರೂ. ಮೀಸಲಿರಿಸಲಾಗಿದೆ.
ಮೈಸೂರಿನ ಸುತ್ತೂರು ಮಠದಿಂದ ಕರಕುಶಲಕರ್ಮಿಗಳಿಗೆ ಅರ್ಬನ್ ಹಾಟ್ ಸೌಲಭ್ಯ ಕಲ್ಪಿಸಲು ಹಾಗೂ ಉನ್ನತೀಕರಿಸಲು 5 ಕೋಟಿ, ಕೆಂಗಲ್ ಹನುಮಂತಯ್ಯ ಹಾಸ್ಟೆಲ್‍ಗೆ 5 ಕೋಟಿ, ಕರಗ ಉತ್ಸವ ಆಚರಿಸುವ 139 ಸಂಘ ಸಂಸ್ಥೆಗಳಿಗೆ ಹಾಗೂ ಕುಂಚಟಿಗರ- ಒಕ್ಕಲಿಗರ ಸಂಘದ ಅಭಿವೃದ್ಧಿಗೆ ತಲಾ 2 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ.
ತಿಪಟೂರಿನಲ್ಲಿ ಹಾಸ್ಯ ಚಕ್ರವರ್ತಿ ದಿ.ನರಸಿಂಹರಾಜು ಸ್ಮರಣಾರ್ಥ ಸ್ಮಾರಕ ಸಭಾ ಮಂದಿರ ನಿರ್ಮಾಣಕ್ಕೆ 2 ಕೋಟಿ ರೂ. ನೀಡಲಾಗಿದೆ

No comments:
Post a Comment