ABC

Saturday, 16 February 2019

ಹುತಾತ್ಮ ಗುರು ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 25ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು: ಉಗ್ರರ ದಾಳಿಯಲ್ಲಿ ಹುತಾತ್ಮನಾದ ಯೋಧ ಗುರು ಅವರ ಕುಟುಂಬಕ್ಕೆ 25ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ಜಮ್ಮುವಿನ ಪುಲ್ವಾಮಾದಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಗುಡಿಗೆರಿಯ ಯೋಧನ ಪಾರ್ಥಿವ ಶರೀರವನ್ನು ವಿಶೇಷ ವಿಮಾನದಲ್ಲಿ ಎಚ್‍ಎಎಲ್ ವಿಮಾನನಿಲ್ದಾಣಕ್ಕೆ ತಂದಾಗ ಬರಮಾಡಿಕೊಂಡು ಗೌರವ ಸಲ್ಲಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಯೋಧರ ಕುಟುಂಬಕ್ಕೆ 25ಲಕ್ಷ ರೂ. ಪರಿಹಾರ ಹಾಗೂ ಅವರ ಪತ್ನಿಗೆ ಸರಕಾರಿ ಹುದ್ದೆ ನೀಡುವುದಾಗಿ ತಿಳಿಸಿದರು.ಯೋಧನ ಪಾರ್ಥಿವ ಶರೀರವನ್ನು ವಿಶೇಷ ವಿಮಾನದಲ್ಲಿ ಸ್ವಗ್ರಾಮಕ್ಕೆ ಕೊಂಡೊಯ್ಯಲು ಮನವಿ ಮಾಡಲಾಯಿತು. ಕಾರಣಾಂತರಗಳಿಂದ ಸಾಧ್ಯವಾಗಲಿಲ್ಲ. ಹಾಗಾಗಿ ಸೇನಾ ವಾಹನದ ಮೂಲಕ ರಸ್ತೆ ಮಾರ್ಗದಲ್ಲಿ ಕೊಂಡೊಯ್ಯಲಾಯಿತು.

ಸಂಜೆ 4ಗಂಟೆಗೆ ನಾನೂ ಕೂಡ ಅಲ್ಲಿಗೆ ತೆರಳಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸುತ್ತೇನೆ ಎಂದು ತಿಳಿಸಿದರು.
ವೀರ ಮರಣವನ್ನಪ್ಪಿದ ಯೋಧ ಗುರು ಅವರ ಕುಟುಂಬದ ಜವಾಬ್ದಾರಿಯನ್ನು ಸರಕಾರ ವಹಿಸಲಿದೆ. ಈ ಬಗ್ಗೆ ಅವರು ಅಧೀರರಾಗುವುದು ಬೇಡ ಅವರ ದುಃಖದಲ್ಲಿ ನಾವು ಕೂಡ ಪಾಲುದಾರರಾಗಿದ್ದೇವೆ ಎಂದು ಹೇಳಿದರು.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...