ಬೆಂಗಳೂರು: ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರ್ಕಾರದ 2ನೇ ಬಜೆಟ್ ಮಂಡನೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಂತಿಮ ಸಿದ್ಧತೆಯಲ್ಲಿ ತೊಡಗಿಕೊಂಡರು. ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿಗಳು ಇದೇ 8 ರಂದು ಬಜೆಟ್ ಮಂಡಿಸಲಿದ್ದಾರೆ. ಅದಕ್ಕಾಗಿ ಬೆಳಗಿನಿಂದ ಅಂತಿಮ ಸಿದ್ಧತೆಯಲ್ಲಿ ತೊಡಗಿದರು.
ಈಗಾಗಲೇ ರೈತ ಪ್ರತಿನಿಧಿಗಳು, ಆಟೋ ಸಂಘದ ಪ್ರತಿನಿಧಿಗಳು, ಉದ್ದಿಮೆದಾರರು ಸೇರಿದಂತೆ ವಿವಿಧ ವಲಯಗಳ ಪ್ರತಿನಿಧಿಗಳೊಂದಿಗೆ ಬಜೆಟ್‍ಪೂರ್ವ ಸಮಾಲೋಚನೆಯನ್ನು ಸಿಎಂ ನಡೆಸಿದ್ದರು.
ಇಲಾಖಾವಾರು ಸಭೆಗಳನ್ನೂ ನಡೆಸಿ ಸಿದ್ಧತೆ ಮಾಡಿಕೊಂಡಿದ್ದಾರೆ. ಪ್ರಚಲಿತ ಕಾರ್ಯಕ್ರಮಗಳನ್ನು ಮುಂದುವರಸುವುದು, ಹೊಸದಾಗಿ ಘೋಷಿಸುವ ಕಾರ್ಯಕ್ರಮಗಳ ಕುರಿತು ಸಿದ್ಧತೆ ನಡೆದಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಲವಾರು ಜನಪರ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ.
ಪೂರ್ಣ ಪ್ರಮಾಣದಲ್ಲಿ ರೈತರ ಸಾಲ ಮನ್ನಾ ಘೋಷಣೆ ಮಾಡಿ ಹಣ ಒದಗಿಸುವ ಬಗ್ಗೆ ಪ್ರಸ್ತಾಪ ಆಗಿದ್ದು, ರೈತರಿಗೆ ಅನುಕೂಲವಾಗುವ ಯೋಜನೆಗಳು ಘೋಷಣೆಯಾಗುವ ಸಾಧ್ಯತೆ ಇದೆ.
ಇಸ್ರೇಲ್ ಮಾದರಿ ತಂತ್ರಜ್ಞಾನ ಬಳಕೆ, ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವುದು ಸೇರಿದಂತೆ ರೈತ ಪರ ಕಾರ್ಯಕ್ರಮಗಳನ್ನು ಬಜೆಟ್‍ನಲ್ಲಿ ಘೋಷಿಸುವ ನಿರೀಕ್ಷೆ ಇದೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಅವರಿಂದಲೂ ಮುಖ್ಯಮಂತ್ರಿಗಳು ಸಲಹೆ ಪಡೆದಿದ್ದರು. ಮೈತ್ರಿ ಸರ್ಕಾರ ಆಗಿರುವುದರಿಂದ ಉಭಯ ಪಕ್ಷಗಳ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳಿಗೆ ಆದ್ಯತೆ ನೀಡುವುದು, ಹಿಂದಿನ ಸರ್ಕಾರದ ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಜನಪ್ರಿಯ ಕಾರ್ಯಕ್ರಮಗಳನ್ನು ಮುಂದುವರೆಸುವ ಕುರಿತು ಬಜೆಟ್‍ನಲ್ಲಿ ಘೋಷಿಸುವ ಸಾಧ್ಯತೆ ಇದೆ.
ಈ ಬಾರಿ ೨೦೧೯ ರ ಬಜೆಟ್ ಮಂಡನೆ ರೈತರು ಬಡವರ ಜನ ಸಾಮನ್ಯರ ಪರ ಇರುತ್ತೆದೆ.

No comments:
Post a Comment