ABC

Wednesday, 20 February 2019

ಕುಮಾರಸ್ವಾಮಿ 5 ವರ್ಷವಲ್ಲ 10 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿರಬೇಕು.

ಮೈಸೂರು: ರಾಜ್ಯ ಮತ್ತಷ್ಟು ಅಭಿವೃದ್ಧಿಯಾಗಬೇಕಾದರೆ ಕುಮಾರಸ್ವಾಮಿ ಅವರು 5 ವರ್ಷವಲ್ಲ, 10 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿರಬೇಕು ಎಂದು ವಾಟಳು ಸೂರ್ಯಸಿಂಹಾಸನ ಮಠಾಧ್ಯಕ್ಷ ಡಾ. ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ‌ ಹೇಳಿದರು.

ತಿ.ನರಸೀಪುರ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ 11ನೇ ಕುಂಭಮೇಳದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಕುಟುಂಬಸ್ಥರು ಧಾರ್ಮಿಕ ಹಿನ್ನೆಲೆಯ ಕುಟುಂಬದಿಂದ ಬಂದವರು. ಅವರ ಕಾರ್ಯವೈಖರಿಯಿಂದ ಜನಮನ್ನಣೆ ಗಳಿಸಿದ್ದಾರೆ ಎಂದರು.ಇದೇ ವೇಳೆ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ ಆರಂಭವಾಗಲು ಶ್ರಮಿಸಿದ ಸ್ವಾಮೀಜಿಗಳನ್ನು ನೆನೆದರು.ಕಾಗಿನೆಲೆ ಪೀಠದ ಅಧ್ಯಕ್ಷರಾದ ಶಿವಾನಂದ ಪುರಿ ಸ್ವಾಮೀಜಿ ಸೇರಿದಂತೆ ಇನ್ನಿತರ ಮಠಾಧೀಶರು ಈ ವೇಳೆ ಹಾಜರಿದ್ದರು.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...