ABC

Friday, 22 February 2019

ನಾಳೆ ಸ್ವ ಕ್ಷೇತ್ರಕ್ಕೆ ಕುಮಾರಸ್ವಾಮಿಯವರ ಭೇಟಿ: 700 ಕೋಟಿ ಅನುದಾನದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ.

ರಾಮನಗರ : ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ನಾಳೆ ತಮ್ಮ ಸ್ವಕ್ಷೇತ್ರ ಚನ್ನಪಟ್ಟಣಕ್ಕೆ ಆಗಮಿಸಲಿದ್ದಾರೆ.ಕ್ಷೇತ್ರದ ಶಾಸಕ ಹಾಗೂ ರಾಜ್ಯದ ಮುಖ್ಯಮಂತ್ರಿಗಳು ತಮ್ಮ ಕ್ಷೇತ್ರಕ್ಕೆ 700 ಕೋಟಿ ಅನುದಾನದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಸಿಎಂ ಹೆಚ್.ಡಿ. ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿ ರಾಜ್ಯದ ಮುಖ್ಯಮಂತ್ರಿ ಅಗಿಯೂ ಅಧಿಕಾರವಹಿಸಿಕೊಂಡರು ಈ ಹಿನ್ನೆಲೆ ಚನ್ನಪಟ್ಟಣ ಜನರಿಗೆ ಬಹುದೊಡ್ಡ ಕೊಡುಗೆ ನೀಡುತ್ತಿದ್ದಾರೆ.

ವಿವಿಧ ಇಲಾಖೆಗಳಿಂದ ಸರಿ ಸುಮಾರು 700 ಕೋಟಿಗೂ ಹೆಚ್ಚು ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನಡೆಯಲಿದ್ದು, ಕ್ಷೇತ್ರದ ಜನರು ಫುಲ್ ಖುಷ್ ಆಗಿದ್ದಾರೆ. ಈ ಸಮಾರಂಭ ಚನ್ನಪಟ್ಟಣ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿದ್ದು, ಈಗಾಗಲೇ ಬೃಹತ್ ವೇದಿಕೆ ಕೂಡ ಸಿದ್ಧವಾಗುತ್ತಿದೆ.ಈ ಸಮಾರಂಭಕ್ಕೆ ಸುಮಾರು 600 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಭದ್ರತಾ ಕಾರ್ಯ ನಿರ್ವಹಿಸಲಿದ್ದಾರೆ. ಸುಮಾರು 15 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆಂದು ರಾಮನಗರ ಎಸಿ​ ಕೃಷ್ಣಮೂರ್ತಿ ತಿಳಿಸಿದ್ದಾರೆ.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...