ABC

Saturday, 23 February 2019

ಸ್ವಕ್ಷೇತ್ರಕ್ಕೆ 750 ಕೋಟಿ ರೂ. ಭರ್ಜರಿ ಗಿಫ್ಟ್ ನೀಡಿದ: ಮುಖ್ಯಮಂತ್ರಿ ಕುಮಾರಸ್ವಾಮಿ.

ರಾಮನಗರ: ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ವಕ್ಷೇತ್ರ ಚನ್ನಪಟ್ಟಣಕ್ಕೆ ಭರ್ಜರಿ ಗಿಫ್ಟ್ ನೀಡಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆಗೆ ಜ್ಯೋತಿ ಬೆಳಗಿಸುವ ಮೂಲಕ ಸಿಎಂ ಚಾಲನೆ ನೀಡಿದ್ದಾರೆ.ನಗರದ ಬಾಲಕರ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಈ ಕಾರ್ಯಕ್ರಮ ನಡೆದಿದ್ದು, 750 ಕೋಟಿಗೂ ಹೆಚ್ಚು ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು.

ಭೈರಪಟ್ಟಣದಲ್ಲಿ‌ ಹಾಲು ಶಿಥಲೀಕರಣ ಘಟಕ, ಶಿಂಷಾ ನದಿಗೆ ನೀರಾವರಿ ಯೋಜನೆ ಸೇರಿ ಹಲವು ಅಭಿವೃದ್ಧಿ ಯೋಜನಗೆ ಸಿಎಂ ಶಂಕುಸ್ಥಾಪನೆ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್, ಸಚಿವ ಎಂ.ಟಿ.ಬಿ ನಾಗರಾಜ್, ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಹಲವು ಸಚಿವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...