ABC

Friday, 8 February 2019

ಮುಖ್ಯಮಂತ್ರಿಗಳ ತವರು ಕ್ಷೇತ್ರದಲ್ಲಿ ಸಂಭ್ರಮಾಚರಣೆ: ರಾಮನಗರ

ರಾಮನಗರ: ಇಂದು ಕುಮಾರಣ್ಣ ಅಭಿಮಾನಿ ಬಳಗದ ವತಿಯಿಂದ ನಾಡಿನ ಮುಖ್ಯಮಂತ್ರಿಯಾದ ಕುಮಾರಣ್ಣ ರವರು ಯಶಸ್ವಿಯಾಗಿ ಜನಪರ, ರೈತಪರ ಬಜೆಟ್ ಮಂಡನೆ ಮಾಡಿರುವುದಕ್ಕೆ ಕುಮಾರಣ್ಣ ಅಭಿಮಾನಿಗಳು ರಾಮನಗರದ ಐಜೂರು ವೃತ್ತದಲ್ಲಿ ಸಿಹಿ ವಿತರಣೆ  ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜೆ.ಡಿ.ಎಸ್ ಕಾನೂನು ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಈ ಬಜೆಟ್ ನಲ್ಲಿ ರಾಮನಗರದ ರೇಷ್ಮೆ ಮಾರುಕಟ್ಟೆ ಆಧುನೀಕರಣ ಹಾಗೂ ಬಲವರ್ಧನೆಗೆ 10 ಕೋಟಿ  ಅನುದಾನ, ರಾಮನಗರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ  ಅಂತರರಾಷ್ಟ್ರೀಯ ಗುಣಮಟ್ಟದ ಮಾವು ಉತ್ಪನ್ನಗಳ ಸಂಸ್ಕರಣೆ ಘಟಕ ಸ್ಥಾಪನೆ, ರಾಮನಗರ ಜಿಲ್ಲೆಯ ಹಾರೋಹಳ್ಳಿ ಯನ್ನು ಹೊಸ ತಾಲ್ಲೂಕಾಗಿ ರಚನೆ,  ಪೂಜ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಹುಟ್ಟೂರು ಬಾನಂದೂರು ಅಭಿವೃದ್ಧಿಗೆ  25 ಕೋಟಿ ಅನುದಾನ ಹಾಗೂ ಪೂಜ್ಯ ಶ್ರೀ ಶಿವಕುಮಾರ ಸ್ವಾಮೀಜಿ ಹುಟ್ಟೂರು ವೀರಾಪುರ ಅಭಿವೃದ್ಧಿಗೆ 25 ಕೋಟಿ ಅನುದಾನ, ಮಂಚನಬೆಲೆ ಜಲಾಶಯ ಅಭಿವೃದ್ಧಿಗೆ 125 ಕೋಟಿ ಅನುದಾನ ನೀಡಿದ್ದಾರೆ ಎಂದರು. ಈ ಸಂಧರ್ಭದಲ್ಲಿ ಜೆ.ಡಿ.ಎಸ್ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎಸ್.ಜಯಕುಮಾರ್, ರೈತ ಸಂಘದ ಅಧ್ಯಕ್ಷರಾದ ತುಂಬೇನಹಳ್ಳಿ ಶಿವಕುಮಾರ್, ಜಿಲ್ಲಾ ಮಾವು ಬೆಳೆಗಾರರ ಸಂಘದ ಉಪಾಧ್ಯಕ್ಷ ಗುಂಗರಹಳ್ಳಿ ಮಹೇಶ್, ಜೆ.ಡಿ.ಎಸ್ SC / ST ಘಟಕದ ಅಧ್ಯಕ್ಷ ಕೆಂಗಲಯ್ಯ,  ಜಿಲ್ಲಾ ಜೆ.ಡಿ.ಎಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಜಿ.ಕೆ.ಗಂಗಾಧರ್, ಜಿಲ್ಲಾ ಜೆ.ಡಿ.ಎಸ್ ಸೇವಾದಳ ವಿಭಾಗದ ಅಧ್ಯಕ್ಷ ಯೋಗೇಶ್ ಕುಮಾರ್, ಕುಮಾರಣ್ಣ ಅಭಿಮಾನಿ ಬಳಗದ  ಶಿವಾಜಿರಾವ್, ಸಿ.ಎಸ್. ರಾಜು, ಮಾಯಗಾನಹಳ್ಳಿ ಸತೀಶ್,ಮಾಹಿತಿ ತಂತ್ರಜ್ಞಾನ ಮಹಾ ಪ್ರಧಾನ ಕಾರ್ಯದರ್ಶಿ ಸಿದ್ಧರಾಜು ಮುಂತಾದವರು ಉಪಸ್ಥಿತರಿದ್ದರು.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...