ABC

Friday, 22 February 2019

ಸುಮಲತಾ ನಮ್ಮ ಸಂಬಂಧಿಕರೇ..ಆದ್ರೆ ನನಗೆ ಪಕ್ಷ ಮುಖ್ಯ : ಸಚಿವ ತಮ್ಮಣ್ಣ.

ಬಾಗಲಕೋಟೆ: ನಟಿ ಸುಮಲತಾ ಅಂಬರೀಶ್ ಅವರು ಮಂಡ್ಯದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ವಿಚಾರದ ಬಗ್ಗೆ ಸಾರಿಗೆ ಸಚಿವ ಡಿಸಿ ತಮ್ಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಸುಮಲತಾ ಅಂಬರೀಷ್ ಸ್ಪರ್ದೆ ವಿಚಾರದಲ್ಲಿ ಜೆಡಿಎಸ್ ಪಕ್ಷದ ವರಿಷ್ಟರ ನಿರ್ಧಾರವೇ ಅಂತಿಮ. ಸುಮಲತಾ ಅವರು ನಮ್ಮ ಸಂಬಂಧಿಕರೇ, ಆದರೆ ಸಂಬಂಧ ಹಾಗೂ ಪಕ್ಷ ಎಂದು ಬಂದಾಗ ನನಗೇ ಪಕ್ಷವೇ ಮುಖ್ಯ ಎಂದು ಸಚಿವ ತಮ್ಮಣ್ಣ ಹೇಳಿದ್ದಾರೆ.
ದೊಡ್ಡರಸಿನಕೆರೆ ಗ್ರಾಮದಲ್ಲಿರೊ ಅವರ ಸಂಬಂಧಿಕರ ಮೂಲಕ ಸಿಎಂ ಜೊತೆ ಮಾತಾಡಿ ನಿರ್ಧಾರ ಮಾಡುವ ಬಗ್ಗೆ ಸುಮಲತಾ ಅವರಿಗೆ ತಿಳಿಸಲು ಹೇಳಿದ್ದೆ. ಆದರೆ ಅವರು ಬರಲಿಲ್ಲ. ಯಾರಿಗೆ ಅವಶ್ಯಕವಾಗಿದೆಯೋ ಅವರು ಮಾತುಕತೆಗೆ ಮುಂದಾಗಬೇಕು ಎಂದರು.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...