ABC

Thursday, 7 February 2019

ಬಿಜೆಪಿ ಸಂಸದರನ್ನು ಅಧಿವೇಶನದಲ್ಲಿ ಕುಟುಕಿದ: ಎಚ್ ಡಿ ದೇವೇಗೌಡರು

ನವದೆಹಲಿ: ಲೋಕಸಭೆಯಲ್ಲಿ ರಾಜ್ಯದ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ಬಗ್ಗೆ ಟೀಕೆ ಮಾಡಿದ ಬಿಜೆಪಿ ನಾಯಕರ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಿಡಿಕಾರಿದ್ದಾರೆ.

ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ವೇಳೆ ಮಾತನಾಡಿದ ಮಾಜಿ ಪ್ರಧಾನಿ, ಕರ್ನಾಟಕದಲ್ಲಿ ರೈತರ ಸಾಲಮನ್ನಾ ಮಾಡುವ ಪ್ರತಿ ಹಂತದ ಹಣದ ಮಾಹಿತಿ ನನ್ನ ಬಳಿ ಇದೆ. ಇದರ ಹಿಂದೆ ನಾನು ಇದ್ದೇನೆ ಎನ್ನುವುದೇ ಯಾರಿಗೂ ತಿಳಿಯುತ್ತಿಲ್ಲ. ಕಡಿಮೆ ಸ್ಥಾನ ಹೊಂದಿರುವ ನಮ್ಮ ಜೊತೆಗೆ ಕಾಂಗ್ರೆಸ್ ಸರ್ಕಾರ ರಚನೆ ಮಾಡಿಕೊಂಡಿದೆ. ಸಮ್ಮಿಶ್ರ ಸರ್ಕಾರ ಬಿದ್ದು ಹೋಗುತ್ತದೆ ಅಂತ ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರಕ್ಕೆ ಬಹುಮತ ಸಾಬೀತು ಪಡಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಕೇವಲ 13 ದಿನಕ್ಕೆ ಬಿದ್ದು ಹೋಗಿತ್ತು. ಅಂತಹ ಮೇರು ಪ್ರತಿಭೆಯೇ ಬಹುಮತ ಸಾಬೀತು ಪಡಿಸಲು ವಿಫಲರಾದರು ಎಂದು ಹೇಳಿ ಬಿಜೆಪಿಯನ್ನು ಕುಟುಕಿದರು.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...