ABC

Saturday, 2 February 2019

ಯೋಜನೆ ನಮ್ಮದು, ಹೆಸರು ಮೋದಿ ಸರ್ಕಾರದ್ದು: ಹೆಚ್‍.ಡಿ. ಕುಮಾರಸ್ವಾಮಿ


ಮೈಸೂರು: ಕೇಂದ್ರ ಸರ್ಕಾರ ಮಂಡನೆ ಮಾಡಿರುವ ಬಜೆಟ್ ನಲ್ಲಿ ಕರ್ನಾಟಕದ ಪ್ರಸ್ತಾವನೆಗಳು ಈಡೇರಿಲ್ಲ. ಆಯುಷ್ಮಾನ್ ಭಾರತ್ ಯೋಜನೆಯಿಂದ ಕೇಂದ್ರದಿಂದ 200 ಕೋಟಿ ಬಂದ್ರೆ, ರಾಜ್ಯ ಸರ್ಕಾರ 800 ಕೋಟಿಯನ್ನು ಈ ಯೋಜನೆಗಾಗಿ ಮೀಸಲಿಟ್ಟಿದೆ. ನಮ್ಮ ಯೋಜನೆಗೆ ಮೋದಿ ಸರ್ಕಾರ ಪ್ರಚಾರ ತೆಗೆದುಕೊಳ್ಳುತ್ತಿದೆ ಎಂದು ಸಿಎಂ ಕುಮಾರಸ್ವಾಮಿ ವ್ಯಂಗ್ಯ ಮಾಡಿದರು.

ಕೇಂದ್ರ ಸರ್ಕಾರ ತಿಂಗಳಿಗೆ 500 ರೂ. ದಿನಕ್ಕೆ 17ರೂ. ಲೆಕ್ಕದಲ್ಲಿ ವಾರ್ಷಿಕವಾಗಿ 6 ಸಾವಿರ ರೂ. ನೀಡುತ್ತೇವೆ ಅಂತಾ ಹೇಳಿದೆ. ಈ ಯೋಜನೆಗೆ ಕರ್ನಾಟಕದ ಕೇವಲ 59 ಲಕ್ಷ ರೈತರು ಇದರ ಲಾಭ ಪಡೆಯಲಿದ್ದಾರೆ. ಕೆಲವು ಸಂಸ್ಥೆಗಳಿಗೆ ಇಂತಿಷ್ಟು ಹಣ ನೀಡಿದ್ರೆ ರಾಜ್ಯಕ್ಕೆ ದೊಡ್ಡ ಮಟ್ಟದಲ್ಲಿ ಯಾವ ಯೋಜನೆಯನ್ನು ನೀಡಿಲ್ಲ. ಕಳೆದ ಎಂಟು ವರ್ಷಗಳಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತರಲಾಗಿದೆ. ಆಯುಷ್ಮಾನ್ ಭಾರತ್, ಕರ್ನಾಟಕ ಆರೋಗ್ಯ ಶ್ರೀ ಯೋಜನೆಗಳಿಂದಾಗಿ ಯಶಸ್ವಿನಿ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಕೇಂದ್ರದ ಮನವಿ ಮೇರೆಗೆ ಕರ್ನಾಟಕ ಆರೋಗ್ಯ ಶ್ರೀ ಕಾರ್ಯಕ್ರಮವನ್ನು ಆಯುಷ್ಮಾನ್ ಭಾರತ್ ಜೊತೆ ವಿಲೀನಗೊಳಿಸಲಾಗಿದೆ. ಈ ಬಾರಿಯ ಬಜೆಟ್ ನಲ್ಲಿ ಯಶಸ್ವಿನಿ ಯೋಜನೆಯನ್ನು ಪುನಃ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಸ್ಪಷ್ಟಪಡಿಸಿದರು.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...