ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯನ್ನು ನಾಳೆ ಬೆಳಗ್ಗೆ ಕರೆದಿದ್ದು, ಎಲ್ಲಾ ಶಾಸಕರಿಗೂ ವಿಪ್ ನೀಡಲಾಗಿದೆ. ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸೌಧದಲ್ಲಿ ನಾಳೆ ಬೆಳಗ್ಗೆ ೯.೩೦ಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಲಿದ್ದಾರೆ.
ಈ ಸಭೆಗೆ ಎಲ್ಲಾ ಶಾಸಕರು ತಪ್ಪದೇ ಹಾಜರಾಗುವಂತೆ ವಿಪ್‍ನಲ್ಲಿ ತಿಳಿಸಲಾಗಿದ್ದು, ಗೈರು ಹಾಜರಾದವರಿಗೆ ಪಕ್ಷಾಂತರ ನಿಷೇಧ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂಬ ಎಚ್ಚರಿಕೆಯನ್ನು ನೀಡಲಾಗಿದೆ.

No comments:
Post a Comment