“ಅಣ್ಣಾ ಕುಮಾರಣ್ಣ, ರವಿ ಪೂಜಾರಿಯನ್ನು ಬಂಧಿಸಿದ್ದು ನಮ್ಮ ಸಮ್ಮಿಶ್ರ ಸರ್ಕಾರವೇ ಎಂದು ತಮಗೆ ತಾವೇ ಕೀರ್ತಿ ಪಡೆಯುವ ಮೊದಲು, ಕಂಪ್ಲಿ ಶಾಸಕ ಗಣೇಶ್‌ರನ್ನು ಬಂಧಿಸಿ ನಿಮ್ಮ ಪೌರುಷ ತೋರಿಸಿ” ಎಂದು ರಾಜ್ಯ ಬಿಜೆಪಿ ಮಾಡಿರುವ ಟ್ವೀಟ್ ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಕ್ಷೇತ್ರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ನನ್ನನ್ನು ಅಣ್ಣಾ ಎಂದು ಕರೆದಿದ್ದಾರೆ. ಅದಕ್ಕೆ ಧನ್ಯವಾದ ಎಂದು ಹೇಳಿದರಲ್ಲದೇ ಟ್ವೀಟ್ ಮಾಡಿದ ಬಿಜೆಪಿಯವರಿಗೆ ಶೀಘ್ರದಲ್ಲೇ ಸಿಹಿ ಸುದ್ದಿ ಸಿಗಲಿದೆ ಎಂದಿದ್ದಾರೆ.
ಶಾಸಕ ಗಣೇಶ್ ರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಕಾನೂನು ಪ್ರಕಾರ ಯಾವ ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡಲಾಗುತ್ತದೆ. 5 ವರ್ಷಗಳ ಕಾಲ ಬಿಜೆಪಿಯವರು ರಾಜ್ಯದಲ್ಲಿ ಅಧಿಕಾರ ನಡೆಸಿದ್ದರು. ಆಗ ಯಾಕೆ ರವಿ ಪೂಜಾರಿಯನ್ನು ಬಂಧಿಸಿರಲಿಲ್ಲವೆಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
No comments:
Post a Comment