ABC

Thursday, 14 February 2019

ಹುತಾತ್ಮ ಯೋಧನ ಕುಟುಂಬಕ್ಕೆ ದೂರವಾಣಿ ಕರೆ ಮಾಡಿದ: ಮುಖ್ಯಮಂತ್ರಿ ಕುಮಾರಸ್ವಾಮಿ ಸಾಂತ್ವಾನ.

ಮಂಡ್ಯ: ದೂರವಾಣಿ ಕರೆ ಮಾಡಿ ಹುತಾತ್ಮ ಯೋಧ ಗುರು ಕುಟುಂಬಕ್ಕೆ ಸಾಂತ್ವನ ಹೇಳುವ ಮೂಲಕ ಮಾನಸಿಕವಾಗಿ ಧೈರ್ಯ ತುಂಬಿದ್ದಾರೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಎಂದು ಹೇಳಲಾಗಿದೆ.ಗುರು ಸಹೋದರ ಆನಂದ್ ಜೊತೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಹುತಾತ್ಮ ಯೋಧನ ಪತ್ನಿಗೆ ಸರ್ಕಾರಿ ಕೆಲಸವನ್ನು ನೀಡುವುದಾಗಿ ಸಿಎಂ ಭರವಸೆ ನೀಡಿದ್ದು, ಕೆಲಸದ ಜೊತೆಗೆ ಸರ್ಕಾರದಿಂದ ಬರುವ ಎಲ್ಲ ಸವಲತ್ತು ಒದಗಿಸಿ ಕೊಡುವುದಾಗಿಯೂ ಸಹ ತಿಳಿಸಿದ್ದಾರೆ.

ಇನ್ನು,ಮುಖ್ಯಮಂತ್ರಿಗಳು ಕುಟುಂಬಕ್ಕೆ ಭರವಸೆ ನೀಡಿರುವ ಬಗ್ಗೆ ಮಾಹಿತಿಯನ್ನು ಸಚಿವ ಹಾಗೂ ಮಂಡ್ಯ ಉಸ್ತುವಾರಿ ಸಚಿವ ಸಿ.ಎಸ್ ಪುಟ್ಟರಾಜು ನೀಡಿದ್ದಾರೆ.ನಿನ್ನೆ ನಡೆದ ಕಾಶ್ಮೀರಾದ ಕಣಿವೆಯ ಪುಲ್ವಾರ್ ಪ್ರದೇಶದಲ್ಲಿ ಸುಮಾರು ೪೦ಕ್ಕಿಂತ ಸಿ ಎಆರ್ ಪಿ ಎಫ್ ಯೋಧರು ಹುತಾತ್ಮರಾಗಿದ್ದರು. ಈ ಘಟನೆಯಲ್ಲಿ
  
ಈ ಘಟನೆಯಲ್ಲಿ ಮಂಡ್ಯ ಜಿಲ್ಲೆಯ ಗುರು ಎಂಬ ವೀರಯೋಧ ಕೂಡ ಇದ್ದರು.
ನಂಗೆ ಅವರು ಬೇಕು ಅಮ್ಮಾ..- ಮುಗಿಲು ಮುಟ್ಟಿದೆ ಹುತಾತ್ಮ ಗುರು ಪತ್ನಿಯ ಆಕ್ರಂದನ: 
ನಾನು ಪ್ರತಿದಿನ ಅವರ ಜೊತೆ ಫೋನಿನಲ್ಲಿ ಮಾತನಾಡುತ್ತಿದ್ದೆ. ಅವರು ಬೆಳಗ್ಗೆ 11 ಗಂಟೆಗೆ ಫೋನ್ ಮಾಡಿದ್ದರು. ನಾನು ಕೆಲಸ ಮಾಡುತ್ತಿದ್ದರಿಂದ ಅವರ ಜೊತೆ ಮಾತನಾಡಲು ಸಾಧ್ಯವಾಗಿಲ್ಲ. ಅವರು ಊರಿಂದ ಹೋಗಿ ನಾಲ್ಕು ದಿನಗಳು ಆಗಿರಲಿಲ್ಲ. ತುಂಬಾ ನೋವಾಗುತ್ತಿದೆ ಎಂದು ಕಲಾವತಿ ಅವರು ಕಣ್ಣೀರು ಹಾಕಿದ್ದಾರೆ.ನನ್ನಿಂದ ಇದನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಗುರುವಾರ ಒಂದು ದಿನ ಅವರ ಜೊತೆ ಮಾತನಾಡಿದ್ರೆ ಆಗುತ್ತಿತ್ತು. ನಾನು 6 ಗಂಟೆಯಿಂದ ಫೋನ್ ಮಾಡಿ ಮಾಡಿ ಸಾಕಾಯ್ತು. ನನಗೆ ಅವರು ಬೇಕು ಅಮ್ಮಾ ಎಂದು ತಾಯಿ ಮಡಿಲಲ್ಲಿ ಮಲಗಿಕೊಂಡು ಅಳುತ್ತಿದ್ದಾರೆ.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...