ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ನಟಸಾರ್ವಭೌಮದ’ ಹವಾ ಜೋರಾಗೇ ಇದ್ದು ಇದೇ ಫೆಬ್ರವರಿ ೭.ರಂದು ಜಗತ್ತಿನಾದ್ಯಂತ ಬಿಡುಗಡೆ ಆಗುತ್ತಿದೆ.
‘ನಟಸಾರ್ವಭೌಮ’ ಚಿತ್ರವನ್ನು ‘ಗೂಗ್ಲಿ’ ಖ್ಯಾತಿಯ ಪವನ್ ಒಡೆಯರ್ ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ಪುನೀತ್ ರಾಜಕುಮಾರ್ ಒಂದು ಹೊಸ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಪುನೀತ್ ಅವರ ಹೇರ್ ಸ್ಟೈಲ್ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ.
ಪುನೀತ್ ರಾಜಕುಮಾರ್ ಓರ್ವ ಟ್ರೆಂಡ್ ಸೆಟ್ಟರ್ ನಟ. ಚಿತ್ರದಲ್ಲಿ ವಿಭಿನ್ನ ಗೆಟಪ್ ಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ನಟಸಾರ್ವಭೌಮ ಚಿತ್ರದಲ್ಲಿ ಪುನೀತ್ ರಾಜಕುಮಾರ್ ಅವರು ಪತ್ರಕರ್ತನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಈ ಚಿತ್ರವನ್ನು ರಾಕ್ ಲೈನ್ ವೆಂಕಟೇಶ್ ನಿರ್ಮಿಸುತ್ತಿದ್ದು ಪುನೀತ್ ಗೆ ಜೋಡಿಯಾಗಿ ರಚಿತಾ ರಾಮ್,ಅನುಪಮಾ ಪರಮೆಶ್ವರನ್ ಅಭಿನಯಿಸಲಿದ್ದಾರೆ. ಚಿತ್ರಕ್ಕೆ ಡಿ ಇಮಾಮ್ ಸಂಗೀತ ಸಂಯೋಜಿಸುತ್ತಿದ್ದು, ವೈಧಿ ಅವರ ಛಾಯಾಗ್ರಹಣವಿದೆಯಂತೆ
ಎಲ್ಲಾ ಚಿತ್ರ ಪ್ರೇಮಿಗಳು ನಟಸಾರ್ವಭೌಮ ಚಿತ್ರ ವೀಕ್ಷಿಸಲು ಅತಿ ಕಾತರದಿಂದ ಕಾಯುತ್ತಿದ್ದಾರೆ.
No comments:
Post a Comment