ತುಮಕೂರು: ಆಪರೇಷನ್ ಕಮಲಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಆಡಿಯೋ ತಮ್ಮದೆಂದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದರು. ಆದರೆ ಈಗ ಅವರೇ ಸಂಭಾಷಣೆ ನಡೆದದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಆದ್ದರಿಂದ ರಾಜೀನಾಮೆ ನೀಡಲಿ ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು ಒತ್ತಾಯಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಆಡಿಯೋ ಬಗ್ಗೆ ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ. ಹಾಗಿದ್ದಮೇಲೆ ಅವರೇ ಹೇಳಿದಂತೆ ರಾಜಕೀಯ ನಿವೃತ್ತಿ ಪಡೆಯಬೇಕು. ಈ ವಿಚಾರವನ್ನು ನಾವು ಸ್ಪೀಕರ್ ಬಳಿಗೆ ಕೊಂಡೊಯ್ಯುತ್ತೇವೆ. ನಾವು ಕಾನೂನು ಪಾಲಿಸುವವರು. ಆದ್ದರಿಂದ ಇದನ್ನು ಸ್ಪೀಕರ್ಗೆ ತಿಳಿಸುತ್ತೇವೆ. ನಂತರ ಅವರು ಯಾವುದಾದರೂ ಕ್ರಮ ಕೈಗೊಳ್ಳಲಿ. ಕಾನೂನಿನ ಪ್ರಕಾರ ಯಡಿಯೂರಪ್ಪ ಅವರ ಶಾಸಕತ್ವ ಅನರ್ಹ ಆಗಬೇಕು ಎಂದೂ ಹೇಳಿದರು.
ಬಿಜೆಪಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಕೀಳು ಮಟ್ಟದ ರಾಜಕಾರಣಕ್ಕಿಳಿದಿದೆ ಎಂದು ಪರಮೇಶ್ವರ್ ವಾಗ್ದಾಳಿ ನಡೆಸಿದರು.

No comments:
Post a Comment