ABC

Friday, 1 February 2019

ಮಂಡ್ಯ ಕಾಂಗ್ರೆಸ್ ಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಪಕ್ಷದ ಭದ್ರಕೋಟೆ.  ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಳೆದ ಕೆಲ ದಿನಗಳಿಂದ ಮಂಡ್ಯ ಕ್ಷೇತ್ರದಿಂದ ನಿಖಿಲ್  ಹಾಗೂ ಅಂಬರೀಷ್ ಕುಟುಂಬದ ಸದಸ್ಯರು ಸ್ಪರ್ಧಿಸುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಆದರೆ ಸುಮಲತಾ ಅಂಬರೀಶ್ ಜೆಡಿಎಸ್ ಪಕ್ಷಕ್ಕೆ ಸೇರಿದವರಲ್ಲ ಎಂದರು. ಹಾಗೊಂದು ವೇಳೆ  ಸುಮಲತಾ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಾದರೆ ಅದಕ್ಕೆ ತಮ್ಮ ವಿರೋಧವಿಲ್ಲ. ಸ್ಪರ್ಧೆ ಮಾಡುವುದು ಅವರ ವೈಯಕ್ತಿಕ ನಿರ್ಧಾರ ಎಂದರು.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಹಾಸನದಲ್ಲಿ ಕಾಂಗ್ರೆಸ್ ಜೊತೆ ಕ್ಷೇತ್ರ ಹೊಂದಾಣಿಕೆ ಸಾಧ್ಯವಾಗದೇ ಇದ್ದರೆ ಅಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಬಹುದು. ದೇವೇಗೌಡ ಅವರೇ ಹೇಳಿರುವಂತೆ ಪ್ರಜ್ವಲ್ ರೇವಣ್ಣ ಹಾಸನಿಂದ ಸ್ಪರ್ಧಿಸುತ್ತಾರೆ. ಉಳಿದಂತೆ ಬೇರೆ ಕ್ಷೇತ್ರಗಳ ಸ್ಪರ್ಧೆಯ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ ಎಂದು ಅವರು ಹೇಳಿದರು.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...