ABC

Sunday, 10 February 2019

ದೆಹಲಿಗೆ ಹೋಗಿ ಮೋದಿಗೆ ಉತ್ತರ ಕೊಡ್ತೀನಿ: ಎಚ್.ಡಿ.ದೇವೇಗೌಡರು.

ಬೆಂಗಳೂರು: ತಾವು ಕಳೆದ 58 ವರ್ಷಗಳಲ್ಲಿ ರಾಜ್ಯ ಮತ್ತು ರಾಷ್ಟ್ರಕ್ಕೆ ಯಾವ್ಯಾವ ಕೊಡುಗೆ ನೀಡಲಾಗಿದೆ ಎಂಬುದನ್ನು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ತಿಳಿಸಿಕೊಡುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ಸೋ ಕಾಲ್ಡ್ ಮಣ್ಣಿನ ಮಗ. ಅವರು ರೈತರಿಗಾಗಿ ಏನು ಮಾಡಿದ್ದಾರೆ? ಅವರ ಮಗ ಏನ್ ಮಾಡಿದ್ದಾರೆ ಎಂಬ ಬಗ್ಗೆ ಲಘುವಾಗಿ ಟೀಕೆ ಮಾಡಿದ್ದಾರೆ. ಈ ಟೀಕೆಗೆ ಸೂಕ್ತ ಉತ್ತರ ಕೊಡಲು ದೆಹಲಿಗೆ ತೆರಳುತ್ತಿರುವುದಾಗಿ ತಿಳಿಸಿದರು.
ತಮ್ಮ ರಾಜಕೀಯ ಜೀವನದಲ್ಲಿ ರೈತರು, ನೀರಾವರಿಗಾಗಿ ಏನೇನು ಮಾಡಿದ್ದೇವೆ. ರಾಜ್ಯ ಮತ್ತು ರಾಷ್ಟ್ರದ ಅಭಿವೃದ್ದಿಗೆ ತಮ್ಮ ಕೊಡುಗೆ ಏನೆಂಬುದನ್ನು ಕೂಡ ಮನವರಿಕೆ ಮಾಡಿಕೊಡುವುದಾಗಿ ದೇವೇಗೌಡರು ಹೇಳಿದರು.
ನೋ ಕಮೆಂಟ್: ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟು ಮಾಡಿರುವ ಧ್ವನಿಸುರುಳಿ ಬಿಡುಗಡೆ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಆಡಿಯೋ ಮಾಡಿರುವವರು ಯಾರು? ಅದು ತಮಗೆ ಸಂಬಂಧಿಸಿದ ವಿಚಾರವಲ್ಲ. ಹೀಗಾಗಿ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಗೌಡರು ನಿರಾಕರಿಸಿದರು.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...