ABC

Wednesday, 20 February 2019

ರಫೇಲ್ ಹಗರಣ ಮರುಪರಿಶೀಲನಾ ಅರ್ಜಿ ವಿಚಾರಣೆಗೆ: ಸುಪ್ರೀಂ ಕೋರ್ಟ್ ಆದೇಶ.

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ ಬಿಗ್ ರಿಲೀಫ್ ನೀಡಿದ್ದ 58000 ಕೋಟಿ ರೂ. ವೆಚ್ಚದ 36ರಫೇಲ್ ಯುದ್ಧ ವಿಮಾನಗಳ ಖರೀದಿ ಒಪ್ಪಂದ ಕುರಿತು ತಾನು ಈ ಹಿಂದೆ ನೀಡಿದ್ದ ತೀರ್ಪಿನ ಮರುಪರಿಶೀಲನೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ.ಫ್ರಾನ್ಸ್‍ನೊಂದಿಗೆ ಮಾಡಿಕೊಳ್ಳಲಾದ ಒಪ್ಪಂದದ ಬಹುವಿವಾದಿತ ವಿಷಯಕ್ಕೆ ಮರುಜೀವ ಬಂದಿದ್ದು ಮುಂದಿನ ಬೆಳವಣಿಗೆ ಭಾರೀ ಕುತೂಹಲ ಕೆರಳಿಸಿದೆ. ರಫೇಲ್ ಯುದ್ಧ ವಿಮಾನಗಳ ಖರೀದಿ ಒಪ್ಪಂದ ಕುರಿತ ಮರುಪರಿಶೀಲನಾ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ ಇದರಿಂದಾಗಿ ಈ ವಿಷಯದಲ್ಲಿ ಭಾರೀ ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಮತ್ತು ಇತರ ಪಕ್ಷಗಳೂ ಕೇಂದ್ರ ಸರಕಾರ ಮತ್ತು ಮೋದಿ ವಿರುದ್ಧ ಮತ್ತೊಂದು ಕಾನೂನು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ.

ರಫೇಲ್ ಒಪ್ಪಂದ ಬಗ್ಗೆ ಈ ಹಿಂದೆ ಸರ್ವೊಚ್ಛ ನ್ಯಾಯಾಲಯ ನೀಡಿದ್ದ ತೀರ್ಪನ್ನು ಪುನರ್‍ಪರಾಮರ್ಶೆ ನಡೆಸಬೇಕೆಂದು ಸುಪ್ರೀಂ ಕೋರ್ಟ್‍ಗೆ ಹಿರಿಯ ವಕೀಲ ಮತ್ತು ಕಾಂಗ್ರೆಸ್ ನಾಯಕ ಪ್ರಶಾಂತ್ ಭೂಷಣ ಸೇರಿದಂತೆ ಕೆಲವರು ಮೇಲ್ಮನವಿ ಸಲ್ಲಿಸಿದ್ದರು.ಈ ಅರ್ಜಿಗಳನ್ನು ಇಂದು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಈ ಬಗ್ಗೆ ಮರುಪರಿಶೀಲನೆ ನಡೆಸಲು ಒಪ್ಪಿಗೆ ಸೂಚಿಸಿದೆ. ಸರಕಾರದ ಕೆಲವು ಉನ್ನತ ಅಧಿಕಾರಿಗಳು ನ್ಯಾಯಾಲಯಕ್ಕೆ ನೀಡಿರುವ ತಪ್ಪು ಮಾಹಿತಿಗಳ ಬಗ್ಗೆಯೂ ಸಂಗ್ರಹ ವಿಚಾರಣೆ ನಡೆಸಬೇಕೆಂದು ಪ್ರಶಾಂತ ಭೂಷಣ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಿ ಫ್ರಾನ್ಸ್‍ನಿಂದ ರಫೇಲ್ ಯುದ್ಧ ವಿಮಾನ ಖರೀದಿ ವ್ಯವಹಾರ ಪಾರದರ್ಶಕವಾಗಿದೆ. ಇದರಲ್ಲಿ ಅನುಮಾನ ಮತ್ತು ಗೊಂದಲಕ್ಕೀಡಾಗುವ ಯಾವುದೇ ಅಂಶಗಳಿಲ್ಲ ಎಂದು ತೀರ್ಪು ನೀಡಿ ಮೋದಿ ನೇತೃತ್ವದ ಎನ್‍ಡಿಎ ಸರಕಾರಕ್ಕೆ ಬಿಗ್ ರಿಲೀಫ್ ನೀಡಿತ್ತು. ಈ ತೀರ್ಪಿನಿಂದ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳಿಗೆ ಭಾರೀ ಹಿನ್ನಡೆಯಾಗಿತ್ತು.ಕೆಲವು ದಿನಗಳ ಹಿಂದೆ ಮಹಾಲೇಖಕ ಪಾಲಕರು (ಸಿಎಜಿ) ಸಂಸತ್‍ನಲ್ಲಿ ಮಂಡಿಸಿದ ತನ್ನ ವರದಿಯಲ್ಲಿ ರಫೇಲ್ ಒಪ್ಪಂದ ದರವು ಯುಪಿಎ ಸರಕಾರಕ್ಕಿಂತ ಎನ್‍ಡಿಎ ಸರಕಾರದ ವ್ಯವಹಾರದಲ್ಲಿ ಶೇ. 2.86ರಷ್ಟು ಅಗ್ಗವಾಗಿದೆ ಎಂದು ವರದಿ ನೀಡಿತ್ತು.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...