ಮಂಡ್ಯ ಜಿಲ್ಲೆಗೆ ೫ ಸಾವಿರ ಕೋಟಿಗೂ ಹೆಚ್ಚಿನ ಅನುದಾನ ಘೋಷಿಸಿದ ಬೆನ್ನಲ್ಲೇ ಕಾವೇರಿ ನದಿ ವಿಚಾರದಲ್ಲಿ ಭಾಗಿಯಾದ ಹೋರಾಟಗಾರರಿಗೆ ಸನ್ಮಾನ್ಯ ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಈ ಬಗ್ಗೆ ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ಹೋರಾಟದ ಸಂದರ್ಭದಲ್ಲಿ ರೈತರ ಮೇಲೆ ಹಾಕಿದ್ದ ಕೇಸುಗಳ ವಾಪಸ್ ಪಡೆಯಲಾಗುತ್ತದೆ. ರೈತರ ಮೇಲೆ ದಾಖಲಾಗಿದ್ದ ಶೇಕಡ 95 ರಷ್ಟು ಕೇಸುಗಳನ್ನು ಕೈಬಿಡಲು ಸರ್ಕಾರ ತೀರ್ಮಾನ ನಡೆಸುತ್ತಿದೆ. ತಾಲೂಕುವಾರು ರೈತರ ಮೇಲೆ ಹೂಡಿರುವ ಕೇಸುಗಳ ಬಗ್ಗೆ ಮಾಹಿತಿ ಕಲೆ ಹಾಕಲು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ.ಹೋರಾಟಗಾರರ ಪಟ್ಟಿ ಕಾರ್ಯ ಭರದಿಂದ ಸಾಗಿದೆಎಂದು ತಿಳಿಸಿದ್ದಾರೆ.
ಇನ್ನೂ, ಇದೇ ಫೆಬ್ರವರಿ 27 ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡ್ಯಕ್ಕೆ ಬರಲಿದ್ದಾರೆ. ಆ ದಿನದಂದೇಈ ವಿಚಾರ ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇದೇ ವಿಚಾರವನ್ನು ಕ್ಯಾಬಿನೆಟ್ ಉಪ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗುತ್ತದೆ.ವರದಿ ಪ್ರಕಾರ, ಉಳಿದಂತೆ ಮಾಧ್ಯಮಗಳ ಕ್ಯಮೆರಾ,ಕಾರುಗಳು ಜಖಂ, ಅಂಗಡಿ, ಮುಗ್ಗಟ್ಟು ಮೇಲೆ ಕಲ್ಲು ತೂರಾಟ, ಪಾಂಡವಪುರ ಜಡ್ಜ್ ಮನೆ ಮೇಲೆ ದಾಳಿಯ ಕೇಸುಗಳು ಕೋರ್ಟ್ ನಲ್ಲೇ ಇತ್ಯರ್ಥ ಮಾಡಿಕೊಳ್ಳಬೇಕಿದೆ. ಸ್ವತಂತ್ರ ಕೇಸುಗಳು ಕೋರ್ಟ್ ನಲ್ಲೇ ಇತ್ಯರ್ಥ ಆಗಬೇಕುಎನ್ನಲಾಗುತ್ತಿದೆ.

No comments:
Post a Comment