ABC

Thursday, 21 February 2019

ಅಕ್ರಮ ಸಕ್ರಮ ಮತ್ತು ಬಗರಹುಕುಂ ಸಾಗುವಳಿದಾರರಿಗೆ ದೋಸ್ತಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್.

ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ವಾಸದ ಮನೆ ಕಟ್ಟಿದವರಿಗೆ ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು ಮತ್ತೆ ವಿಸ್ತರಿಸಲಾಗಿದೆ. ಅದೇ ರೀತಿ ಬಗರ್ ಹುಕುಂ ಸಾಗುವಳಿದಾರರಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಈ ವಿಷಯ ಕುರಿತು ಮಾಹಿತಿ ನೀಡಿದ್ದು, ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಕಟ್ಟಿರುವ ವಾಸದ ಮನೆಗಳನ್ನು ಕರ್ನಾಟಕ ಭೂ ಕಂದಾಯ ಕಾಯ್ದೆಯ ಅಡಿಯಲ್ಲಿ ಸಕ್ರಮ ಗಳಿಸಿಕೊಳ್ಳಲು ಅರ್ಜಿ ಸಲ್ಲಿಕೆಯ ಅವಧಿಯನ್ನು 2019 ರ ಮಾರ್ಚ್ 31 ರ ವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವವರು ಕರ್ನಾಟಕ ಭೂ ಕಂದಾಯ ಕಾಯ್ದೆ ಅಡಿ ಬಗರ್ ಹುಕುಂ ಸಾಗುವಳಿ ಅರ್ಜಿ ಸಲ್ಲಿಸಲು ಕಾಲಾವಧಿಯನ್ನು ಕೂಡ ವಿಸ್ತರಣೆ ಮಾಡಲಾಗಿದೆ. ನಮೂನೆ 50 ಮತ್ತು 53 ರ ಅಡಿ ಅರ್ಜಿ ಸಲ್ಲಿಸಲು ಕಾಲಾವಧಿಯನ್ನು 2020 ರ ಎಪ್ರಿಲ್ 25 ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ನಮೂನೆ 50 ಮತ್ತು 53 ರ ಅಡಿ ಅರ್ಜಿ ಸಲ್ಲಸಲು ವಿಫಲವಾದವರು ನಮೂನೆ 57 ರ ಅಡಿ ಅರ್ಜಿ ಸಲ್ಲಿಸಲು ಮಾರ್ಚ್ 16 ರ ವರೆಗೆ ಅವಕಾಶ ನೀಡಲಾಗಿದೆ.2005 ರ ಜನವರಿ 1 ಕ್ಕೆ ಮೊದಲು ಕನಿಷ್ಠ ಮೂರು ವರ್ಷ ಅನಧಿಕೃತ ಸಾಗುವಳಿ ಮಾಡುತ್ತಿರುವ ರೈತರು ಕಾಲಮಿತಿಯೊಳಗೆ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಲಾಗಿದೆ.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...