ABC

Thursday, 28 February 2019

‘ನನ್ನ ಉಸಿರಿರುವವರೆಗೂ ಮಂಡ್ಯ ಅಭಿವೃದ್ಧಿಗೆ ಒತ್ತು ನೀಡುತ್ತೆನೆ’ : ಎಚ್ ಡಿ ಕುಮಾರಸ್ವಾಮಿ.

ಮಳವಳ್ಳಿ: ಮಂಡ್ಯಜಿಲ್ಲೆಯ ಅಭಿವೃದ್ಧಿ ಬಗ್ಗೆ ನನ್ನ ಹೃದಯದಲ್ಲಿ ಗುರಿ ಇಟ್ಟುಕೊಂಡಿದ್ದೆನೆ. ನನ್ನ ಉಸಿರಿರುವವರೆಗೂ ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡುತ್ತೆನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.ನಗರದ ಸರಕಾರಿ ಮಹಾವಿದ್ಯಾಲಯ(ಸ್ವಾಯತ್ತ) ಅವರಣದಲ್ಲಿ ನಡೆದ ಸಮಾರಂಭದಲ್ಲಿ ಮಂಡ್ಯ ಜಿಲ್ಲೆಯಲ್ಲಿನ 5000 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಅಭಿವೃದ್ಧಿ ವಿಷಯದಲ್ಲಿ ಜಿಲ್ಲೆಗೆ ದೊಡ್ಡ ಅನ್ಯಾಯವಾಗಿದೆ. ಇಷ್ಟು ವರ್ಷ ಆಡಳಿತ ನಡೆಸಿದವರ ಕೈಯಲ್ಲಿ ಜಿಲ್ಲೆಯ ಅಭಿವೃದ್ಧಿ ಆಗಿಲ್ಲವೆಂದು ಟೀಕಿಸಿದರು.

ಆ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಮಂಡ್ಯದ ಜನರು ಮುಗ್ಧತೆ, ಪ್ರೀತಿಗೆ ಹೆಸರಾದವರು. ಹಣಕ್ಕಾಗಿ ಮಾರು ಹೋಗುವವರಲ್ಲ.ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಅಧಿಕೃತವಾಗಿ ಚಾಲನೆ ನೀಡಿದ್ದು, ಇನ್ನೂ ಹೆಚ್ಚಿನ ಅನುದಾನ ನೀಡುವ ಮೂಲಕ ಮಾದರಿ ಜಿಲ್ಲೆಯಾಗಿ ರೂಪಿಸಲಾಗುವುದು.

ನಾನು ಮಂಡ್ಯಕ್ಕೆ ಮಾತ್ರ ಸೀಮಿತವಾಗಿಲ್ಲ. ರಾಜ್ಯದ ಮುಖ್ಯಮಂತ್ರಿಯಾಗಿ ಇಡೀ ರಾಜ್ಯವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯುವ ಪ್ರಯತ್ನ ಮಾಡುತ್ತಿದ್ದೆನೆ ಎಂದರು.ಸಚಿವರಾದ ಸಾ.ರಾ. ಮಹೇಶ್, ಜಿ.ಟಿ.ದೇವೇಗೌಡ, ಶಾಸಕರಾದ ಮರಿತಿಬ್ಬೆಗೌಡ, ಎಂ.ಶ್ರಿನಿವಾಸ್, ಕೆ.ಸುರೇಶ್‍ಗೌಡ, ಕೆ.ಸಿ.ನಾರಾಯಣಗೌಡ, ಡಾ.ಕೆ.ಅನ್ನದಾನಿ, ಕೆ.ಟಿ.ಶ್ರಿಕಂಠೇಗೌಡ, ಅಪ್ಪಾಜಿಗೌಡ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಫ್ರುಲ್ಲಾಖಾನ್, ಜಿ.ಪಂ. ಅಧ್ಯಕ್ಷೆ ನಾಗರತ್ನ ಸ್ವಾಮಿ, ಉಪಾಧ್ಯಕ್ಷೆ ಗಾಯಿತ್ರಿ, ಸದಸ್ಯರಾದ ಜೆ.ಪ್ರೆಮಕುಮಾರಿ, ಅನುಪಮ ಯೋಗೇಶ್, ಸಿ.ಅಶೋಕ್, ಜಿಲ್ಲಾಧಿಕಾರಿ ಎನ್.ಮಂಜುಶ್ರಿ, ಮಾಜಿ ಶಾಸಕ ಜಿ.ಬಿ.ಶಿವಕುಮಾರ್ ಭಾಗವಹಿಸಿದ್ದರು.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...