ABC

Friday, 22 February 2019

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ: ಕೋನರಡ್ಡಿ ನೇಮಕ.

ಬೆಂಗಳೂರು : ರಾಜ್ಯದ ಸಮ್ಮೀಶ್ರ ಸರಕಾರದ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಅವರ ರಾಜಕೀಯ ಕಾರ್ಯದರ್ಶಿಯಾಗಿ ನವಲಗುಂದ ಮಾಜಿ ಶಾಸಕ ಹಾಗೂ ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಎನ್. ಹೆಚ್. ಕೋನರಡ್ಡಿ ಅವರು ನೇಮಕಗೊಂಡಿದ್ದಾರೆ.ಈ ಕುರಿತ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅಧಿಕೃತ ವಾಗಿ ಆದೇಶ ಹೊರಡಿಸಿದ್ದಾರೆ.

ಇದು ಸಚಿವ ಸಂಪುಟ ದರ್ಜೆಯ ಸ್ಥಾನಮಾನವಾಗಿದ್ದು, ಶನಿವಾರ ಇಲ್ಲವೇ ಸೋಮವಾರ ಅಧಿಕಾರ ಸ್ವೀಕರಿಸುವ ಸಾಧ್ಯತೆಗಳಿವೆ.

ಇದೇ ವೇಳೆ ಮುಖ್ಯಮಂತ್ರಿ ಸಂಸದೀಯ ಕಾರ್ಯದರ್ಶಿ ಯಾಗಿ ಶ್ರೀನಿವಾಸಮೂರ್ತಿ, ನಾರಾಯಣ ಸ್ವಾಮಿ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

ಉತ್ತರ ಕರ್ನಾಟಕ ಭಾಗದ ಜೆಡಿಎಸ್ ಪ್ರಭಾವಿ ಮುಖಂಡರು ಆಗಿರುವ ಕೋನರಡ್ಡಿ ಅವರು ಪಕ್ಷ ಸಂಘಟನೆ ಜೊತೆಗೆ ಮಹದಾಯಿ, ಕಳಸಾ-ಬಂಡೂರಿಗಾಗಿ ನಿರಂತರವಾಗಿ ಹದಿನೈದು ಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ, ಹಲವಾರು ಬಾರಿ ಪಾದಯಾತ್ರೆ, ನವಲಗುಂದ ನರಗುಂದ ದಿಂದ ನವದೆಹಲಿಯ ವೆರೆಗೆ ಹೋರಾಟ ನಡೆಸಿ, ವಿಧಾನಸಭೆಯ ಅಧಿವೇಶನದಲ್ಲಿ ಹಕ್ಕೊತ್ತಾಯ ಮಾಡುವ ಮೂಲಕ ನಾಡಿನ ಗಮನ ಸೆಳೆದಿದ್ದರು.

ಇದಲ್ಲದೆ, ರೈತರ ಪರ ನೂರಾರು ಬಾರಿ ಬೀದಿಗಳಿದು ಹಗಲು ರಾತ್ರಿ ಎನ್ನದೆ ಹೋರಾಟ ನಡೆಸಿ, ನವಲಗುಂದ ವಿಧಾನಸಭಾ ಕ್ಷೇತ್ರದ ಇತಿಹಾಸದಲ್ಲಿಯೇ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ವಿರೋಧ ಪಕ್ಷದ ಶಾಸಕನಾಗಿ ಮೂರು ಸಾವಿರ ಕೋಟಿಗೂ ಹೆಚ್ಚು ಅನುದಾನ ತಂದು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದರು.

ಅವರ ಜನಪರ ಹೋರಾಟ, ಕಾಳಜಿ, ಸಾಮಾಜಿಕ ಬದ್ದತೆ ಕಂಡು ಪಕ್ಷದ ವರಿಷ್ಟ ಹೆಚ್.ಡಿ. ದೇವೇಗೌಡ, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ, ರಾಜ್ಯ ಕಾರ್ಯಾಧ್ಯಕ್ಷ. ಬಸವರಾಜ ಎಸ್. ಹೊರಟ್ಟಿ ಅವರ ಒತ್ತಾಸೆ ಮೇರೆಗೆ ಕೋನರಡ್ಡಿ ಅವರನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಿರುವುದು ಉತ್ತರ ಕರ್ನಾಟಕ ಭಾಗದ ಜನತೆಗೆ ಅದರಲ್ಲೂ ವಿಶೇಷವಾಗಿ ರೈತ ಸಮುದಾಯಕ್ಕೆ ದೊಡ್ಡ ಹುರುಪು ಗೌರವ ತಂದು ಕೊಟ್ಟಂತಾಗಿದೆ.

ಇದೇವೇಳೆ ಮುಂಬರುವ ಲೋಕಸಭಾ ಚುನಾವಣೆಗೂ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಒತ್ತಡ ಕೇಳಿ ಬರುತ್ತಿದ್ದು, ಕ್ಷೇತ್ರವನ್ನು ಕಾಂಗ್ರೆಸ್ ಬಿಟ್ಟು ಕೊಟ್ಟು ಜೆಡಿಎಸ್ ಪಾಲಾದರೆ ಕೋನರಡ್ಡಿ ಅವರನ್ನು ಧಾರವಾಡ ಲೋಕಸಭಾ ಕ್ಷೇತ್ರದ ಕಣಕ್ಕೆ ಇಳಿಸುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಆ ಮೂಲಕ ಉತ್ತರ ಕರ್ನಾಟಕ ಭಾಗದ ಶಕ್ತಿ ಕೇಂದ್ರ ವಾದ ಧಾರವಾಡ ಲೋಕಸಭಾ ಚುನಾವಣಾ ಕಣ ಇನ್ನಷ್ಟು ರಂಗೇರಲಿದೆಯೇ ಕಾದು ನೋಡಬೇಕಿದೆ.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...