ABC

Saturday, 9 February 2019

ರಾಜ್ಯ ಬಜೆಟ್ ಗೆ ಪೇಜಾವರ ಸ್ವಾಮೀಜಿಯವರ ಶ್ಲಾಘನೆ.

ಧರ್ಮಸ್ಥಳ: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜ್ಯದ ಅಭಿವೃದ್ಧಿ ಪೂರಕವಾದ, ಎಲ್ಲಾ ಜನರಿಗೂ ಸಂತೋಷ ನೀಡುವಂತಹ ಬಜೆಟ್ ಮಂಡಿಸಿದ್ದಾರೆ ಎಂದು ಉಡುಪಿ ಪೇಜಾವರ ಮಠದ ವಿಶ್ವೇಶ್ವರ ಸ್ವಾಮೀಜಿ ಶ್ಲಾಘಿಸಿದರು.

ಧರ್ಮಸ್ಥಳದ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಪ್ರಯುಕ್ತ ಪ್ರಾರಂಭಿಸುತಿರುವ ಕೆರೆ ಸಂಜೀವಿನಿ ಯೋಜನೆ ಉದ್ಘಾಟನಾ ಸಮಾರಂಭ ವೇದಿಕೆಯಲ್ಲಿ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳು ಬರುವುದು ತಡವಾದ ಕಾರಣ ಸ್ವಾಮೀಜಿಗಳು ಸಮಾರಂಭವನ್ನು ಉದ್ಘಾಟಿಸಿ. ಮಾತನಾಡಿ ತೆರಳಿದರು. ನಂತರ ಮುಖ್ಯಮಂತ್ರಿಗಳು ವೇದಿಕೆ ಮೇಲೆ ಬಂದ ಬಳಿಕ ಸ್ವಾಮೀಜಿಯವರು ಪುನಹ ಬಂದು ಮಾತನಾಡಿದರು.

ಕುಮಾರಸ್ವಾಮಿ ಅವರು ಮಂಡಿಸಿರುವ ಬಜೆಟ್ ಅತ್ಯುನ್ನತ ವಾಗಿದೆ. ಎಲ್ಲ ಜನರು ಮತ್ತು ಕ್ಷೇತ್ರಗಳಿಗೂ ಅನುದಾನ ಹಂಚಿಕೆ ಮಾಡಿದ್ದಾರೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ಪೂರಕವಾಗಿದೆ ಎಂದು ಸ್ವಾಮೀಜಿಯವರು ಹೇಳಿದರು.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...