ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಾಸಕರಿಗೆ ಆಮಿಷವೊಡ್ಡಿದ್ದಾರೆ ಎನ್ನಲಾದ ಆಡಿಯೋವನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಹಿನ್ನೆಲೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ.
ಕಲಬುರಗಿಯಲ್ಲಿಯೂ ಸಿಪಿಐಎಂ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಬಿಜೆಪಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರೈತ ಹೋರಾಟಗಾರ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಾಡೆ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಯಿತು.
ಈ ವೇಳೆ ಮಾತನಾಡಿದ ಮಾರುತಿ, ಬಿಎಸ್ವೈ ಅವರು ಚುನಾಯಿತ ಜನಪ್ರತಿನಿಧಿಗಳನ್ನು ದನ ಖರೀದಿ ಮಾಡಿದ ಹಾಗೆ ಖರೀದಿಸಿ, ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿರುವುದು ಖಂಡನೀಯ. ಚಿಂಚೋಳಿ ಶಾಸಕ 50 ಕೋಟಿ ರೂ.ಗೆ ಮಾರಾಟವಾಗಿರುವುದು ಸಾಬೀತಾಗಿದೆ. ಕ್ಷೇತ್ರದ ಅಭಿವೃದ್ಧಿ ಮರೆತು ಕುದುರೆ ವ್ಯಾಪಾರಕ್ಕೆ ಬಲಿಯಾಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಚಿಂಚೋಳಿ ಕ್ಷೇತ್ರದಲ್ಲಿ ಅವರ ವಿರುದ್ಧ ಪ್ರಚಾರ ಮಾಡಿ ಅವರನ್ನು ಸೋಲಿಸಿಯೇ ತೀರುತ್ತೇವೆ ಎಂದು ಎಚ್ಚರಿಕೆ ನೀಡಿದರು.

No comments:
Post a Comment