ABC

Monday, 18 February 2019

ಹಾಸನದಲ್ಲಿ ಐಐಟಿ ಸ್ಥಾಪಿಸಬೇಕೆಂಬುದು ದೇವೇಗೌಡರ ಕನಸಾಗಿತ್ತು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ.

ಹಾಸನದಲ್ಲಿ ಐಐಟಿ ಸ್ಥಾಪಿಸಬೇಕೆಂಬುದು ದೇವೇಗೌಡರ ಕನಸಾಗಿತ್ತು.  ಅದಕ್ಕಾಗಿ ದೇವೇಗೌಡರು ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಆದ್ರೆ ಕರ್ನಾಟಕಕ್ಕೆ ಸಿಕ್ಕ ಐಐಟಿ ಧಾರವಾಡದಲ್ಲಿ ಸ್ಥಾಪನೆಯಾಯಿತು. ಆದರು ನಾವು ದೇವೇಗೌಡರ ಕನಸಿನಂತೆ  ರಾಜ್ಯ ಸರ್ಕಾರದ ಅನುದಾನದಲ್ಲಿ ಹಾಸನದಲ್ಲಿ ವಿಶ್ವ ಮಟ್ಟದ ಕ್ಯಾಂಪಸ್ ಸ್ಥಾಪನೆ ಮಾಡುತ್ತೇವೆ, ಆ ಮೂಲಕ ಹಾಸನವನ್ನು ಉತ್ತಮ ಶೈಕ್ಷಣಿಕ ಕೇಂದ್ರವನ್ನಾಗಿಸುತ್ತೇವೆ ಎಂದು ಹಾಸನದಲ್ಲಿ  ನಡೆದ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಎಚ್.ಡಿ.ಕುಮಾರಸ್ವಾಮಿ ಶಂಕುಸ್ಥಾಪನೆ ಮಾಡಿ ಮಾತನಾಡಿದರು. ಇನ್ನು ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ವಿಶ್ವ ಮಟ್ಟದ ಕ್ಯಾಂಪಸ್ ಸ್ಥಾಪನೆಗೆ ಚಾಲನೆ ನೀಡಲಾಗುವುದು. ರಾಜ್ಯದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಶಿಕ್ಷಣದ ಮೂಲಕ ಹಲವಾರು ರೀತಿ ಬದಲಾವಣೆಗಳನ್ನು ತರಲಾಗುತ್ತಿದೆ. ಇನ್ನು ಸಾಕಷ್ಟು ವಿರೋಧಕ್ಕೆ ಕಾರಣವಾಗಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯವನ್ನು ವಿಭಾಗ ಮಾಡುವ ಉದ್ದೇಶವಿಲ್ಲ. ಉತ್ತರ-ದಕ್ಷಿಣ ಎಂಬ ತಾರತಮ್ಯವಿಲ್ಲ ರಾಜ್ಯದ ಸಮಗ್ರ ಅಭಿವೃದ್ದಿಯೇ ನಮ್ಮ ಸರ್ಕಾರದ ಚಿಂತನೆಯಾಗಿದೆ ಎಂದು ಸಿಎಂ ಕುಮಾರಸ್ವಾಮಿಯವರು ತಮ್ಮ ನಿಲುವು ಸ್ಪಷ್ಟಪಡಿಸಿದರು.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...