ABC

Wednesday, 6 February 2019

ಎಲ್ಲ ಮಹಿಳೆಯರಿಗೆ ಪ್ರವೇಶ ಕಲ್ಪಿಸುತ್ತೇವೆ: ಶಬರಿಮಲೆ ದೇವಸ್ಥಾನ ಮಂಡಳಿ

ನವದೆಹಲಿ: ಶಬರಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು ಬದಲಾಯಿಸಿಕೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾವತ್ ಆಗಿ ಪಾಲಿಸುತ್ತೇವೆ ಎಂದು ತಿಳಿಸಿದೆ.

ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಇಂದು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ವಿಚಾರಣೆ ನಡೆಸಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ, ನಾವು ನಮ್ಮ ನಿಲುವನ್ನು ಬದಲಾಯಿಸಿದ್ದೇವೆ. ಧರ್ಮ ಗ್ರಂಥದಲ್ಲಿ ಸ್ತ್ರೀಯರನ್ನು ಹೊರಗಿಡಬೇಕೆಂದು ಹೇಳಿಲ್ಲ. ಹೀಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಎಲ್ಲಾ ಸ್ತ್ರೀಯರಿಗೆ ಪ್ರವೇಶಕ್ಕೆ ಅವಕಾಶ ನೀಡುತ್ತೇವೆ ಎಂದು ಹೇಳಿಕೆ ನೀಡಿದೆ.

ಶಬರಿಮಲೆಗೆ ಮಹಿಳೆಯರಿಗೆ ಪ್ರವೇಶಕ್ಕೆ ಅವಕಾಶ ಕೊಡುವ ಸುಪ್ರೀಂಕೋರ್ಟ್ ತೀರ್ಪನ್ನು ಮರುಪರಿಶೀಲನೆ ಮಾಡುವಂತೆ 54 ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾಯಮೂರ್ತಿಗಳಾದ ಆರ್.ಎಫ್.ನಾರಿಮನ್, ಎ.ಎಂ.ಖಾನ್ವಿಲ್ಕರ್, ಡಿ.ವೈ.ಚಂದ್ರಚೂಡ್ ಹಾಗೂ ಇಂದೂ ಮಲ್ಹೋತ್ರಾ ಅವರ ಪೀಠವು ಮರಪರಿಶೀಲನಾ ಅರ್ಜಿಯ ೬/೨/೧೯ ವಿಚಾರಣೆ ನಡೆದಿದರು.

ಕೇರಳ ಸರ್ಕಾರದ ಅಧೀನದಲ್ಲಿ ನಡೆಯುವ ಶಬರಿಮಲೆ ದೇವಸ್ಥಾನ ಮಂಡಳಿಯು 2018 ಸೆಪ್ಟೆಂಬರ್ ನಲ್ಲಿ ಸುಪ್ರೀಂಕೋರ್ಟ್ ತೀರ್ಪನ್ನು ವಿರೋಧಿಸಿತ್ತು. ಬಳಿಕ ನವೆಂಬರ್ ವರೆಗೆ ನಿರ್ಧಾರ ಕೈಗೊಳ್ಳಲು ಕಾಲಾವಕಾಶ ಕೇಳಿತ್ತು. ಆದರೆ ಈಗ ದೇವಸ್ಥಾನಕ್ಕೆ ಮಹಿಳೆಯರಿಗೆ ಯಾವುದೇ ವಯೋಮಿತಿ ಇಲ್ಲ. ಎಲ್ಲರಿಗೂ ಮುಕ್ತ ಅವಕಾಶ ನೀಡಲಾಗುತ್ತದೆ ಎಂದು ಒಪ್ಪಿಕೊಂಡಿದೆ.2018 ಸೆಪ್ಟೆಂಬರ್ ನಲ್ಲಿ ಶಬರಿಮಲೆ ಪ್ರವೇಶಕ್ಕೆ ಸುಪ್ರೀಂನ ಐದು ನ್ಯಾಯಾಧೀಶರ ಪೀಠವು ತೀರ್ಪು ನೀಡಿತ್ತು. ಆದರೆ ಇವರಲ್ಲಿ ಇಂದೂ ಮಲ್ಹೋತ್ರಾ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಅಕ್ಟೋಬರ್ ನಲ್ಲಿ ಮಹಿಳೆಯರ ಪ್ರವೇಶ ವಿರೋಧಿಸಿ ಕೆಲ ಹಿಂದೂ ಪರ ಸಂಘಟನೆಗಳು ಭಾರೀ ಪ್ರತಿಭಟನೆ ನಡೆಸಿದ್ದವು. ಇಲ್ಲಿಯವರೆಗೆ ಇಬ್ಬರು ಮಹಿಳೆಯರು ಮಾತ್ರ ದೇಗುಲ ಪ್ರವೇಶಿಸಿ ಅಯ್ಯಪ್ಪನ ದರ್ಶನ ಪಡೆದಿದ್ದಾರೆ.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...