ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದ್ದ ಮುಳಬಾಗಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್ ಮತ್ತೆ ಕಾಂಗ್ರೆಸ್ ತೆಕ್ಕೆಗೆ ಮರಳಿದ್ದಾರೆ.ಮೈತ್ರಿ ಸರ್ಕಾರದ ಕಾರ್ಯವೈಖರಿ ತೃಪ್ತಿ ನೀಡಿಲ್ಲ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಸಿಕ್ಕಿಲ್ಲ ಎಂದು ಅಸಮಾಧಾನಗೊಂಡು ಕಾಂಗ್ರೆಸ್, ಜೆಡಿಎಸ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆಯುತ್ತಿರುವುದಾಗಿ ನಾಗೇಶ್ ತಿಳಿಸಿದ್ದರು.
ಇದೀಗ ಮತ್ತೆ ಕಾಂಗ್ರೆಸ್‌ನ ಸಹ ಸದಸ್ಯತ್ವವನ್ನು ಶಾಸಕ ನಾಗೇಶ್ ಸ್ವೀಕರಿಸಿದ್ದು, ಈ ಸಂಬಂಧ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಪತ್ರವನ್ನು ನೀಡಿದ್ದಾರೆ. ಈ ವೇಳೆ ಸಚಿವ ಡಿ.ಕೆ. ಶಿವಕುಮಾರ್ ಜತೆಯಲ್ಲಿದ್ದರು.

No comments:
Post a Comment