ABC

Tuesday, 5 February 2019

ಕುಖ್ಯಾತ ರೌಡಿಗಳ ಮನೆ ಮೇಲೆ ದಿಢೀರ್ ದಾಳಿ : ಖಡಕ್ ಎಚ್ಚರಿಕೆ ಕೊಟ್ಟ ಡಿಸಿಪಿ ರವಿಚೆನ್ನಣ್ಣನವರು.

ಬೆಂಗಳೂರು: ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ರವಿ ಡಿ. ಚೆನ್ನಣ್ಣನವರ್ ನಗರದ ಕುಖ್ಯಾತ ರೌಡಿಗಳಿಗೆ ಬಿಸಿ ಮುಟ್ಟಿಸಿದ್ದು, ರೌಡಿಗಳ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಕಲಾಸಿಪಾಳ್ಯ, ಮಾರ್ಕೆಟ್ ಹಾಗೂ ಕಾಟನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ 10 ಕ್ಕೂ ಅಧಿಕ ರೌಡಿಗಳ ಮನೆ ಮೇಲೆ ದಾಳಿ ಮಾಡಿ ಹಲವು ಮಾರಕಾಸ್ತ್ರಗಳನ್ನು ಡಿಸಿಪಿ ಮತ್ತು ತಂಡ ವಶಪಡಿಸಿಕೊಂಡು ರೌಡಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಹೆಚ್ಚಾಗುತ್ತಿರುವ ಹಲ್ಲೆ ಸುಲಿಗೆ ಪ್ರಕರಣಗಳಿಗೆ ಕಡಿವಾಣ ಹಾಕುವಲ್ಲಿ ಕ್ರಮ ಕೈಗೊಳ್ಳುತ್ತಿರುವ ಡಿಸಿಪಿ ಚೆನ್ನಣ್ಣವರ್, ರೌಡಿಗಳನ್ನು ಮಟ್ಟ ಹಾಕುವಲ್ಲಿ ನಿರತರಾಗಿದ್ದಾರೆ. ಈ ಹಿನ್ನಲೆಯಲ್ಲಿ ತಡರಾತ್ರಿ ರೌಡಿಗಳ ಮನೆ ಮೇಲೆ ದಾಳಿ ನಡೆಸಿ ಖಡಕ್ ಎಚ್ಚರಿಕೆ ನೀಡಿದ್ದಾರೆ

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...