ABC

Monday, 4 February 2019

ದೇವೇಗೌಡರ ಆರೋಗ್ಯ ವಿಚಾರಿಸಿದ ನಟ ಶಿವರಾಜ್​ಕುಮಾರ್​​ ದಂಪತಿ.

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಆರೋಗ್ಯ ವಿಚಾರಿಸಲು ನಟ ಶಿವರಾಜ್​ಕುಮಾರ್, ಪತ್ನಿ ಗೀತಾ ಶಿವರಾಜ್​ಕುಮಾರ್ ಅವರು ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಇಂದು ಭೇಟಿ ನೀಡಿದ್ದರು.
ಶಿವರಾಜ್​ಕುಮಾರ್ ಜೊತೆ ಮಾಜಿ ಶಾಸಕ ಮಧು ಬಂಗಾರಪ್ಪ ಕೂಡ ಆಗಮಿಸಿ ದೇವೇಗೌಡರ ಆರೋಗ್ಯ ವಿಚಾರಿಸಿದರು. ದೇವೇಗೌಡರ ನಿವಾಸದಿಂದ ಹೊರ ಬಂದು ಮಾಧ್ಯಮಗಳ ಜೊತೆ ಮಾತನಾಡಿದ ನಟ ಶಿವರಾಜ್​​ಕುಮಾರ್, ದೇವೇಗೌಡರ ಆರೋಗ್ಯ ವಿಚಾರಿಸಲು ಬಂದಿದ್ದೆ. ಅವರು ಆರೋಗ್ಯವಾಗಿದ್ದಾರೆ. ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದರು.
ನನಗೂ ಬೆನ್ನು ನೋವಿತ್ತು. ಆಸ್ಪತ್ರೆಗೆ ಹೋಗಿ ಬಂದಿದ್ದೇನೆ. ಡ್ಯಾನ್ಸ್ ಮಾಡಿದ್ದರಿಂದ ಬೆನ್ನು ನೋವು ಬಂದಿತ್ತು. ಈಗ ಆರೋಗ್ಯವಾಗಿದ್ದೇನೆ ಎಂದರು.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...