ABC

Thursday, 21 February 2019

ಜೆಡಿಎಸ್ ಸೀಟು ಹಂಚಿಕೆ ವಿಚಾರದಲ್ಲಿ ಯಾವುದೇ ತೊಡಕಿಲ್ಲ: ಸಿಎಂ ಕುಮಾರಸ್ವಾಮಿ.

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮಾಡಿರುವಆಪರೇಷನ್ ಕಮಲ ಧ್ವನಿ ಸುರುಳಿ ಪ್ರಕರಣವನ್ನು SIT ತನಿಖೆಗೆ ವಹಿಸಲು ತಮಗೆ ಆತುರವಿಲ್ಲ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ತಮ್ಮ ಗೃಹ ಕಚೇರಿ ಕೃಷ್ಣದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ಯಡಿಯೂರಪ್ಪ ಮಾಡಿರುವ ಅವಹೇಳನಕಾರಿ ಆಡಿಯೋ ಪ್ರಕರಣವನ್ನು SITಗೆ ಕೊಡುತ್ತೇವೆ. ಆದರೆ ಯಾವುದೇ ತರಾತುರಿಯಲ್ಲಿ ವಹಿಸುವ ಅಗತ್ಯವಿಲ್ಲ. ಯಾರನ್ನೋ ಹೆದರಿಸಲು ತನಿಖೆ ನಡೆಸುವ ಅಗತ್ಯವಿಲ್ಲ. ನ್ಯಾಯಯುತ ತನಿಖೆ ನಡೆಸುವುದು ತಮ್ಮ ಉದ್ದೇಶವಾಗಿದೆ. ಸ್ಪೀಕರ್ ರಮೇಶ್ ಕುಮಾರ್ ಅವರು ಈಗಾಗಲೇ ಆರೋಪ ಮುಕ್ತರಾಗಿದ್ದಾರೆ. ನ್ಯಾಯಯುತ ತನಿಖೆಗೆ ಒಂದಷ್ಟು ಕಾಲಾವಕಾಶಬೇಕು. ವ್ಯವಸ್ಥೆ ಸರಿಮಾಡಲು ಒಂದಷ್ಟು ಕ್ರಮಗಳನ್ನು ಕೈಗೊಳ್ಳಬೇಕಿದೆ. ಈಗಾಗಲೇ ಬೇರೆ ಬೇರೆ ವಿಚಾರಗಳ ಬಗ್ಗೆ ತನಿಖೆ ಆಗಬೇಕು ಎಂದು ಸ್ಪಷ್ಟ ಪಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ಲೋಕಸಭಾ ಚುನಾವಣೆಗೆ ಕ್ಷೇತ್ರವಾರು ಸೀಟು ಹಂಚಿಕೆ ಬಗ್ಗೆ ಮಾತನಾಡಿದ ಅವರು, ಯಾವುದೇ ಗೊಂದಲವಿಲ್ಲದೆ 3-4 ದಿನಗಳಲ್ಲಿ ಎಲ್ಲ ಬಗೆಹರಿಯುತ್ತದೆ. ಕಾಂಗ್ರೆಸ್ ನಾಯಕರಿಗೆ ತಮ್ಮನ್ನು ಭಿಕ್ಷುಕರ ರೀತಿ ನಡೆಸಿಕೊಳ್ಳಬೇಡಿ ಎಂದಿದ್ದೇನೆ. ಯಾವುದೇ ಗೊಂದಲಗಳಿಲ್ಲದೆ ಸೀಟು ಹಂಚಿಕೆ‌ ಪ್ರಕ್ರಿಯೆ ಮುಗಿಯಲಿದೆ. ಇದರಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ಮಾಧ್ಯಮದವರು ನಿಶ್ಚಿಂತೆಯಿಂದ ಇರಿ ಎಂದು ಸಲಹೆ ಕೊಟ್ಟಿದ್ದಾರೆ.
ಇದಾದ ಬಳಿಕ ಸುಮಲತಾ ಅಂಬರೀಶ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ವಿಚಾರದ ಪ್ರಶ್ನೆಗೆ ಉತ್ತರಿಸಿದ ಸಿಎಂ ಕುಮಾರಸ್ವಾಮಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಚುನಾವಣೆಗೆ ನಿಲ್ಲಬಹುದು. ಚುನಾವಣೆಗೆ ನಿಲ್ಲುವವರಿಗೆ ತಾವು ಅಭಿನಂದನೆ ಸಲ್ಲಿಸುತ್ತೇನೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...