ABC

Friday, 15 February 2019

ಬಂಡಾಯ ಶಾಸಕರ ಸಮಸ್ಯೆಗೆ ಸಿದ್ದರಾಮಯ್ಯ ಕೊಟ್ರು ದೊಡ್ಡ ಮದ್ದು..!

ಬೆಂಗಳೂರು: ಬಂಡಾಯ ಒಂದೇ ನಿಮಗೆ ಪರಿಹಾರವಲ್ಲ ನಿಮ್ಮ ನಿಮ್ಮ ಅಸಮಾಧಾನಗಳನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸೋಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಮೇಶ್ ಜಾರಕಿಹೊಳಿ, ನಾಗೇಂದ್ರ ಜತೆ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದು, ಬಂಡಾಯ ಒಂದೇ ನಿಮಗೆ ಪರಿಹಾರವಲ್ಲ ನಿಮ್ಮ ನಿಮ್ಮ ಅಸಮಾಧಾನಗಳನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸೋಣ. ಸದ್ಯ ಈ ಬಗ್ಗೆ ಮುಂದಿನ ದಿನಗಳಲ್ಲಿ ಮತ್ತೆ ಬಂಡಾಯದ ಮಾತಾಡಬೇಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅತೃಪ್ತರಿಗೆ ಬುದ್ದಿ ಹೇಳಿದ್ದಾರೆ.

ಇನ್ನು, ಬಜೆಟ್ ಅಧಿವೇಶನಕ್ಕೂ ಮುನ್ನ ಅತೃಪ್ತ ಶಾಸಕರ ಮೇಲೆ ಆಪರೇಷನ್ ಕಮಲ ನಡೆಸಲಾಗಿತ್ತು ಈ ಆಪರೇಷನ್ ನಲ್ಲಿ ಕಾಂಗ್ರೆಸ್ ಶಾಸಕರು ಹಾಗೂ ಜೆಡಿಎಸ್ ಶಾಸಕರು ಸೇರಿದಂತೆ 6ಕ್ಕೂ ಹೆಚ್ಚು ಶಾಸಕರನ್ನು ಬಾಂಬೆ ರೆಸಾರ್ಟ್ ನಲ್ಲಿ ಉಳಿಸಿಕೊಳ್ಳಲಾಗಿತ್ತು ಎಂಬ ಸುದ್ದಿಯೂ ಕೂಡ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...