ABC

Sunday, 24 February 2019

ಜನರ ಅಭಿಮಾನಕ್ಕೆ ಕಟ್ಟುಬಿದ್ದು ಹುಟ್ಟುಹಬ್ಬ ಆಚರಿಸಿಕೊಂಡ: ಅನಿತಾ ಕುಮಾರಸ್ವಾಮಿ

ಬೆಂಗಳೂರು: ನನ್ನ ತಂದೆ 12 ವರ್ಷಗಳ ಹಿಂದೆ ತೀರಿಕೊಂಡ ನಂತರ ನನ್ನ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಆದರೆ ಇದೀಗ ರಾಮನಗರ ಜನತೆಯ ಅಭಿಮಾನಕ್ಕೆ ಕಟ್ಟು ಬಿದ್ದು ಮತ್ತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದೇನೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಭಾವುಕರಾಗಿ ನುಡಿದಿದ್ದಾರೆ.

ರಾಮನಗರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಮತ್ತು ನಾಯಕರ ಸಮ್ಮುಖದಲ್ಲಿ ಶಾಸಕರ ಭವನದಲ್ಲಿ ಹಮ್ಮಿಕೊಂಡಿದ್ದ ತಮ್ಮ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ನನ್ನ ತಂದೆಯ ಸಾವಿನ ನಂತರ ಹುಟ್ಟುಹಬ್ಬ ಆಚರಿಸಿಕೊಳ್ಳುವುದನ್ನು ನಿಲ್ಲಿಸಿದ್ದೇನೆ. ಆದರೆ ನೀವು ನನ್ನ ಮೇಲೆ ಇಟ್ಟಿರುವ ಪ್ರೀತಿ-ವಿಶ್ವಾಸಕ್ಕೆ ಗೌರವ ಕೊಡಬೇಕೆಂಬ ಉದ್ದೇಶದಿಂದ ಮತ್ತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತೀದ್ದೇನೆ.ನಿಮ್ಮ ಪ್ರೀತಿ-ವಿಶ್ವಾಸಕ್ಕೆ ಸದಾ ಚಿರಋಣಿಯಾಗಿರುತ್ತೇನೆ ಮತ್ತು ನಿಮ್ಮ ಕಷ್ಟ-ಸುಖಗಳಿಗೆ ಸ್ಪಂದಿಸಿದ್ದೇನೆ ಎಂದು ಅನಿತಾ ಕುಮಾರಸ್ವಾಮಿ ಭರವಸೆ ನೀಡಿದರು.

ಬಿಬಿಎಂಪಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಇಮ್ರಾನ್ ಪಾಷ ಮಾತನಾಡಿ, ರಾಮನಗರದ ಸರ್ವತೋಮುಖ ಅಭಿವೃದ್ಧಿಗಾಗಿ 234 ಕೋಟಿ ರೂ.ಗಳ ಅನುದಾನ ಪಡೆದಿರುವ ಅನಿತಾ ಕುಮಾರಸ್ವಾಮಿಯವರು ನುಡಿದಂತೆ ನಡೆಯುವ ದಿಟ್ಟ ಮಹಿಳೆ.ಇವರ ಅವಧಿಯಲ್ಲಿ ರಾಮನಗರ ಸರ್ವತೋಮುಖ ಅಭಿವೃದ್ಧಿಯಾಗಲಿ. ಹಾಗೂ ಅನಿತಕ್ಕ ಅವರು ಈ ರಾಜ್ಯದ ಮಂತ್ರಿಯಾಗಿ ಇಡೀ ನಾಡಿಗೆ ಸೇವೆ ಸಲ್ಲಿಸುವಂತಾಗಲಿ ಎಂದು ಹಾರೈಸಿದರು.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...