ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಏಳು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಹೀಗಿದ್ದರೂ ಉಪಚುನಾವಣೆಯಲ್ಲಿ ಹೆಚ್ಚು ಮತ ಪಡೆದಿದ್ದೇನೆ. ಈಗ ಮತ್ತಷ್ಟು ಶ್ರಮ ಹಾಕಿದ್ರೆ ಗೆಲುವು ಸಾಧಿಸುತ್ತೇನೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ನಾನು ಪಕ್ಷ ಹೇಳಿದಂತೆ ಕೇಳುತ್ತೇನೆ. ಈ ಬಾರಿ ಲೋಕಸಭಾ ಚುನಾವಣೆಗೆ ಶಿವಮೊಗ್ಗದಿಂದ ಸ್ಪರ್ಧಿಸುವಂತೆ ಜೆಡಿಎಸ್ ವರಿಷ್ಠರು ಹೇಳಿದ್ದಾರೆ. ಇದಕ್ಕೆ ಕಾಂಗ್ರೆಸ್, ಜೆಡಿಎಸ್ ನಾಯಕರು ಒಪ್ಪಿದ್ದಾರೆ. ಆ ಕಾರಣಕ್ಕಾಗಿಯೇ ದೇವೇಗೌಡರು ನನ್ನ ಹೆಸರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಬಾರಿ ದಡ ಮುಟ್ಟುತ್ತೇನೆ ಅನ್ನೋ ವಿಶ್ವಾಸ ಇದೆ. ದೇವೇಗೌಡರು ಮನೆಗೆ ಬಂದದ್ದು ನನ್ನ ತಂದೆಯವರೇ ಬಂದಷ್ಟು ಖುಷಿಯಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು.

No comments:
Post a Comment