ಬೆಂಗಳೂರು: ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ರಾಜಕೀಯ ಕಾರ್ಯದರ್ಶಿ ಹಾಗೂ ರಾಜ್ಯ ಸರ್ಕಾರದ ವಿವಿಧ ನಿಗಮ ಮಂಡಳಿಗಳಿಗೆ ನೇಮಕ ಮಾಡಲು ಜೆಡಿಎಸ್ ಮುಂದಾಗಿದ್ದು, ಶಿವರಾತ್ರಿ ಹಬ್ಬಕ್ಕೂ ಮುನ್ನ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಉದ್ದೇಶಿಸಿದೆ.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಮಾಜಿ ಶಾಸಕರಾದ ಎನ್.ಎಚ್.ಕೋನರೆಡ್ಡಿ ಹಾಗೂ ಮಧುಬಂಗಾರಪ್ಪನವರ ಹೆಸರು ಪ್ರಸ್ತಾಪವಾಗಿದ್ದು, ಇನ್ನು ಅಂತಿಮಗೊಂಡಿಲ್ಲ. ಸಂಸದೀಯ ಕಾರ್ಯದರ್ಶಿ ಹುದ್ದೆಗೆ ಶಾಸಕರಾದ ಕೆ.ಎಂ.ಶಿವಲಿಂಗೇಗೌಡ, ಡಾ.ಅನ್ನದಾನಿ ಡಾ.ಶ್ರೀನಿವಾಸಮೂರ್ತಿ, ನಾರಾಯಣಗೌಡ ಅವರ ಹೆಸರುಗಳು ಪ್ರಸ್ತಾಪವಾಗುತ್ತಿದ್ದು, ಇನ್ನು ಅಧಿಕೃತವಾಗಿ ಪ್ರಕಟಿಸಿಲ್ಲ.ಈಗಾಗಲೇ ಮೊದಲ ಹಂತದಲ್ಲಿ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ 9 ಹಾಲಿ ಶಾಸಕರನ್ನು ನೇಮಕ ಮಾಡಲು ವರಿಷ್ಠರು ನಿರ್ಧರಿಸಿದ್ದಾರೆ. ಅಲ್ಲದೆ ಮೂರು ಮಂದಿ ವಿಧಾನಪರಿಷತ್ ಸದಸ್ಯರಿಗೂ ಅವಕಾಶ ಕಲ್ಪಿಸುವ ಸಾಧ್ಯತೆಗಳಿವೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಮೊದಲ ಹಂತದ ನೇಮಕಾತಿ ಪಟ್ಟಿ ಇಂದು ಅಥವಾ ನಾಳೆ ಪ್ರಕಟಗೊಳ್ಳುವ ಸಾಧ್ಯತೆ ಇದೆ. 2ನೇ ಹಂತದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಅಂತರದಿಂದ ಸೋತಿದ್ದ ಅಭ್ಯರ್ಥಿಗಳಿಗೂ ನಿಗಮಮಂಡಳಿಗಳಲ್ಲಿ ಸ್ಥಾನ ನೀಡಲು ಉದ್ದೇಶಿಸಲಾಗಿದೆ.ಇಂತಹ ಐದಾರು ಮಂದಿ ಸೋತ ಅಭ್ಯರ್ಥಿಗಳನ್ನು ನಿಗಮ ಮಂಡಳಿಗೆ ನೇಮಕ ಮಾಡಲಾಗುತ್ತದೆ. ಉಳಿದ ನಿಗಮ ಮಂಡಳಿಗಳಿಗೆ ಮಾಜಿ ಶಾಸಕರನ್ನು ನೇಮಕ ಮಾಡಲು ಉದ್ದೇಶಿಸಲಾಗಿದೆ. ಈ ಎಲ್ಲ ನೇಮಕಗಳನ್ನು ಶಿವರಾತ್ರಿ ಹಬ್ಬಕ್ಕೂ ಮುನ್ನವೇ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ.
ಲೋಕಸಭೆ ಚುನಾವಣೆಗೆ ನೀತಿಸಂಹಿತೆ ಜಾರಿಯಾದರೆ ಸರ್ಕಾರದ ನೇಮಕಾತಿಗಳಿಗೆ ಅವಕಾಶ ದೊರೆಯುವುದಿಲ್ಲ. ಹೀಗಾಗಿ ಚುನಾವಣಾ ವೇಳಾಪಟ್ಟಿ ಘೋಷಣೆಯಾಗುವ ಮುನ್ನವೇ ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ. ಅಲ್ಲದೆ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರಿಂದ ನಿಗಮಮಂಡಳಿಗಳಿಗೆ ನೇಮಕ ಮಾಡುವಂತೆ ಒತ್ತಡವೂ ಹೆಚ್ಚುತ್ತಿದೆ.

No comments:
Post a Comment