ABC

Friday, 8 February 2019

ಆಸ್ಪತ್ರೆಯಲ್ಲಿ ಕಾಣಿಸಿಕೊಂಡ ಜೆಡಿಎಸ್ ಶಾಸಕ ನಾರಾಯಣಗೌಡ..!

ಕಳೆದ ಮೂರು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಕೆ.ಆರ್.ಪೇಟೆ. ಜೆಡಿಎಸ್ ಶಾಸಕ ನಾರಾಯಣಗೌಡ ಆಸ್ಪತ್ರೆಯಲ್ಲಿರುವುದು ಪತ್ತೆಯಾಗಿದೆ.

ಅಧಿವೇಶನಕ್ಕೆ ಗೈರು ಹಾಜರಾಗಿ ಜೆಡಿಎಸ್ ಕಾಂಗ್ರೆಸ್ ವರಿಷ್ಠರಲ್ಲಿ ದಿಗ್ಬ್ರಮೆ ಮೂಡಿಸಿದ್ದ ಶಾಸಕ ಡಾ.ನಾರಾಯಣಗೌಡ ಮುಂಬೈನ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದ್ದಾರೆ.ನಾನು ಆಫರೇಷನ್ ಕಮಲದ ಖೆಡ್ಡಕ್ಕೆ ಸಿಲುಕಿಲ್ಲ… ಅನಾರೋಗ್ಯದಿಂದಾಗಿ ಬಜೆಟ್ ಅಧಿವೇಶನದಲ್ಲಿ ಭಾಗವಹಿಸಿಲ್ಲ ನಾರಾಯಣಗೌಡ ಸ್ಪಷ್ಠನೆ ನೀಡಿದ್ದಾರೆ.
ನಾನು ಅನಾರೋಗ್ಯದಿಂದ ಬಳಲುತ್ತಿದ್ದೇನೆ. ವೈದ್ಯರು ಇನ್ನೂ ಒಂದೆರಡು ದಿನಗಳು ಚಿಕಿತ್ಸೆ ಪಡೆದುಕೊಂಡು ಆರೋಗ್ಯ ಸ್ಥಿತಿಯು ಉತ್ತಮವಾದ ನಂತರ ಆಸ್ಪತ್ರೆಯಿಂದ ಡಿಶ್ಚಾರ್ಜ್ ಮಾಡುವುದಾಗಿ ಹೇಳಿದ್ದಾರೆ.

ನನ್ನ ಅನಾರೋಗ್ಯದ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ತಿಳಿಸಿದ್ದೇನೆ ಎಂದು ಶಾಸಕ ಡಾ.ನಾರಾಯಣಗೌಡ ಮುಂಬೈನ ಜಸ್ ಲೋಕ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿ ರುವಂತೆಯೇ ದೃಶ್ಯದಲ್ಲಿ ಕಾಣಿಸಿಕೊಂಡಿದ್ದಾರೆ.ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಎಚ್ಡಿಕೆ ಮತ್ತು ಸಿದ್ದರಾಮಯ್ಯ ಇಬ್ಬರನ್ನೂ ತಾವು ಭೇಟಿ ಮಾಡುವುದಾಗಿ ನಾರಾಯಣಗೌಡ ಹೇಳಿಕೊಂಡಿದ್ದಾರೆ.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...