ಮಂಡ್ಯ: ಯಡಿಯೂರಪ್ಪ, ಸಿದ್ದರಾಮಯ್ಯ ಮಕ್ಕಳು ರಾಜಕೀಯದಲ್ಲಿ ಇಲ್ವಾ?ಮಂಡ್ಯಲೋಕಸಭಾ ಕ್ಷೇತ್ರದಿಂದ ನಿಖಿಲ್ ಸ್ಪರ್ಧಿಸಿದರೆ ನೀವೇಕೆ ಕುಟುಂಬ ರಾಜಕಾರಣ ಎಂದು ಟೀಕಿಸುತ್ತೀರಾ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಕಿಡಿಕಾರಿದ್ದಾರೆ.ಮದ್ದೂರಿನ ಹೊಳೆ ಆಂಜನೇಯ ದೇವಾಲಯಕ್ಕೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, ದೇವೇಗೌಡರ ಕುಟುಂಬ ಎಂದೂ ಕೂಡ ಹಿಂಬಾಗಿಲ ರಾಜಕಾರಣ ಮಾಡಿಲ್ಲ. ನಾವು ಜನರ ಮುಂದೆ ಹೋಗಿ ಚುನಾವಣೆ ಎದುರಿಸಿ ಗೆದ್ದಿದ್ದೇವೆ.
ಈಗ ನೀವು ನಿಖಿಲ್ ಸ್ಪರ್ಧೆಯನ್ನು ಕುಟುಂಬ ರಾಜಕಾರಣ ಎನ್ನುತ್ತಿದ್ದೀರಲ್ಲ. ಕಾಂಗ್ರೆಸ್-ಬಿಜೆಪಿ ಹಲವು ಮುಖಂಡರ ಮಕ್ಕಳು ರಾಜಕೀಯದಲ್ಲಿ ಇಲ್ಲವೇ ಎಂದು ಪ್ರಶ್ನಿಸಿದರು. ನಾನು ದೈವ ಭಕ್ತೆ. ನಾನು ಎಲ್ಲಿದ್ದರೂ ದೇವಸ್ಥಾನಕ್ಕೆ ಆಗಾಗ ಭೇಟಿ ನೀಡುತ್ತೇನೆ, ಇಲ್ಲಿ ಬಂದಿರುವುದರ ಬಗ್ಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದರು.
ನಮ್ಮ ಎದುರಾಳಿಗಳು ಯಾರೆಂಬುದನ್ನು ತಲೆಕೆಡಿಸಿಕೊಳ್ಳುವುದಿಲ್ಲ. ಚುನಾವಣೆ ಎದುರಿಸಲು ಸಿದ್ಧರಿದ್ದೇವೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಸಕ್ರಿಯವಾಗಿ ಪಕ್ಷದ ಪರ ಪ್ರಚಾರ ಮಾಡಿ ಶ್ರಮಿಸಿದ್ದಾರೆ ಎಂದು ತಿಳಿಸಿದರು
ರಾಜ್ಯದ ಅಭಿವೃದ್ಧಿ ಬಗ್ಗೆ ನಾವು ಸದಾ ಚಿಂತಿಸುತ್ತೇವೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್‍ನಲ್ಲಿ ಎಲ್ಲಾ ಜಿಲ್ಲೆಗಳಿಗೂ ಸಮಾನ ನ್ಯಾಯ ಕಲ್ಪಿಸಿದ್ದಾರೆ ಎಂದರು. ರಾಜ್ಯದಲ್ಲಿ ಉತ್ತಮ ಮಳೆ, ಬೆಳೆಯಾಗಿ ಎಲ್ಲರೂ ಸಮೃದ್ದಿಯಿರುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.

No comments:
Post a Comment