ABC

Friday, 1 March 2019

ಬಿಎಸ್‌ವೈ ಬಂಧನಕ್ಕೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಮುಖ್ಯಮಂತ್ರಿಗಳಿಗೆ : ಹನುಮೇಗೌಡ ದೂರು.

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನ ಬಂಧಿಸುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರು ಸಿಎಂ ಕುಮಾರಸ್ವಾಮಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ವಾಯು ಸೇನೆಯ ಕಾರ್ಯಚರಣೆ ಕುರಿತು ಯಡಿಯೂರಪ್ಪ ಹಗುರವಾಗಿ ಮಾತನಾಡಿದ್ದಾರೆ. ರಾಷ್ಟ್ರವೇ ಮೆಚ್ಚಿದ ಏರ್​ಸ್ಟ್ರೈಕ್​ ಅನ್ನು ಅವರು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುವಂತಹ ಹೇಳಿಕೆ ನೀಡಿದ್ದಾರೆ. ಹೀಗಾಗಿ, ಅವರನ್ನು ಬಂಧಿಸುವಂತೆ ಪತ್ರದ ಮೂಲಕ ಮುಖ್ಯಮಂತ್ರಿ, ಪೊಲೀಸ್ ಮಹಾನಿರ್ದೇಶಕರಿಗೆ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಾಮಾಜಿಕ ಕಾರ್ಯಕರ್ತ ಹನುಮೇಗೌಡ ಕೋರಿದ್ದಾರೆ.
ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಸೈನಿಕರ ನಡುವೆ ದಾಳಿ ಪ್ರತಿದಾಳಿ ನಡೆಯುತ್ತಿದೆ. ಗಡಿಯಲ್ಲಿನ ಜನರು ಯುದ್ಧ ಭೀತಿಯಿಂದ ನಲುಗಿದ್ದಾರೆ. ಸೈನಿಕರ ಕೆಚ್ಚೆದೆಯ ಹೋರಾಟವನ್ನು ದೇಶದ ನಾಗರಿಕರೆ ಜಾತಿ, ಮತ, ಧರ್ಮದ ತಾರತಮ್ಯವಿಲ್ಲದೆ ಪ್ರಶಂಸಿಸಿದ್ದಾರೆ. ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಸೈನಿಕರ ತ್ಯಾಗ, ಬಲಿದಾನ ಕೊಂಡಾಡಿ ಸೈನ್ಯಕ್ಕೆ ಅಗತ್ಯ ಬೆಂಬಲ ಕೊಡಬಹುದಿತ್ತು. ಆದರೆ, ಅವರು ಮೋದಿ ಅಲೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ, ರಾಷ್ಟ್ರೀಯ ಬದ್ಧತೆಗೆ ಸಂಚಕಾರ ತರುವ ಹೇಳಿಕೆ ನೀಡಿದ ಯಡಿಯೂರಪ್ಪ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...