ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ಮಾಡುವುದು ಖಚಿತವಾಗಿದೆ.
ತಾತ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಂದ ನಿಖಿಲ್ ಕುಮಾರಸ್ವಾಮಿ ರಾಜಕೀಯಕ್ಕೆ ಬರಲು ಒಪ್ಪಿಗೆ ಸಿಕ್ಕಿದೆ.ಈ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಇಂದು ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಇಂದು ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಆಗಮಿಸಿದ ನಿಖಿಲ್ ಕುಮಾರ ಸ್ವಾಮಿ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೇವೇಗೌಡರು ಕೊಟ್ಟಿರುವ ಜವಾಬ್ದಾರಿ ಸಂಪೂರ್ಣವಾಗಿ ನಿರ್ವಹಿಸುತ್ತೇನೆ. ಅಧಿಕೃತವಾಗಿ ದೇವೇಗೌಡರು ಟಿಕೆಟ್ ಘೋಷಣೆ ಮಾಡಿದ್ದಾರೆ. ಮಂಡ್ಯದ ಋಣವನ್ನು ತೀರಿಸಲು ಕೊನೆ ಉಸಿರು ಇರುವವರೆಗೂ ಪ್ರಯತ್ನ ಪಡುತ್ತೇನೆ. ವರಿಷ್ಠರು ತೀರ್ಮಾನ ಮಾಡಿದ ಮೇಲೆ ನಾವು ಸ್ಪರ್ಧಿಸಬೇಕು ಎಂದು ಹೇಳಿದರು.
ನಿನ್ನೆ ಭಾನುವಾರ (ಫೆ.0೩) ಮಂಗಳೂರಿನಲ್ಲಿ ಮಾತನಾಡಿದ್ದ ಎಚ್ ಡಿ ದೇವೇಗೌಡ ಅವರು, ನಿಖಿಲ್ ಚುನಾವಣೆಗೆ ನಿಲ್ಲುತ್ತೇನೆ ಎಂದಿದ್ದರು. ತಾತನಿಗೆ ಪ್ರಜ್ವಲ್ ಬಗ್ಗೆ ಮಾತ್ರ ಆಸಕ್ತಿ ಇದೆ ಎಂದು ಜನರು ಹೇಳುವಂತಾಗಬಾರದು. ಅದಕ್ಕೆ ನಿಖಿಲ್ ಗೂ ಅವಕಾಶ ಕೊಡಲು ನಿರ್ಧಾರ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದರು.

No comments:
Post a Comment