ABC

Tuesday, 12 March 2019

ಯಾವುದೇ ಆತಂಕ,ಗೊಂದಲವಿಲ್ಲದೆ ಕೆಲಸ ಮಾಡುತ್ತಿದ್ದೇವೆ : ಎಚ್ ಡಿ ಕುಮಾರಸ್ವಾಮಿ.

ಬೆಂಗಳೂರು: ಯಾವುದೇಆತಂಕ, ಗೊಂದಲವಿಲ್ಲದೆ ಆರಾಮಾಗಿದ್ದು, ಏನು ಕೆಲಸ ಮಾಡಬೇಕೋ ಆ ಕೆಲಸವನ್ನು ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಸೀಟು ಹಂಚಿಕೆ ಬಗ್ಗೆ ತಮ್ಮ ಪಕ್ಷದ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ. ಮೂರ್ನಾಲ್ಕು ದಿನಗಳಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ ಅಂತಿಮವಾಗಲಿದೆ ಎಂದರು.

ಮೈಸೂರು ಲೋಕಸಭಾ ಕ್ಷೇತ್ರದಲ್ಲಿನ ಪೈಪೋಟಿ  ಬಗ್ಗೆ ಮಾಹಿತಿ ಇಲ್ಲ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಎಲ್ಲಿ ಸ್ಪರ್ಧಿಸಲಿದ್ದಾರೆ ಎಂಬುದು ಇನ್ನೊಂದು ವಾರದಲ್ಲಿ ಗೊತ್ತಾಗಲಿದೆ ಎಂದು ಹೇಳಿದರು. ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಗೆ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲಾ ಕಡೆ ಪರ-ವಿರೋಧ ಇದ್ದೇ ಇರುತ್ತದೆ. ಎಲ್ಲೋ ಹುಟ್ಟಿದವರು ಎಲ್ಲೆಲ್ಲೋ ಸ್ಪರ್ಧೆ ಮಾಡಿ ಆಯ್ಕೆಯಾಗಿದ್ದಾರೆ.

ಉದಾಹರಣೆಗೆ ಕೇಂದ್ರ ಸಚಿವ ಸದಾನಂದಗೌಡರು ಮಂಗಳೂರಿನಿಂದ ಬಂದು ಬೆಂಗಳೂರಿನಲ್ಲಿ ಸಂಸದರಾಗಲಿಲ್ಲವೆ ? ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡ್ಯದಲ್ಲಿ ಹುಟ್ಟಿ ಶಿವಮೊಗ್ಗದಲ್ಲಿ ರಾಜಕೀಯ ಮಾಡುತ್ತಿಲ್ಲವೇ ? ಸ್ವತಃ ನಾನೇ ಹಾಸನ ಜಿಲ್ಲೆಯಲ್ಲಿ ಹುಟ್ಟಿ ರಾಮನಗರದಲ್ಲಿ ರಾಜಕೀಯ ಮಾಡುತ್ತಿಲ್ಲವೇ ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದರೂ ನಿಲ್ಲಬಹುದು.

ವಿರೋಧದ ಹಿಂದೆ ಏನೇನು ನಡೆಯುತ್ತದೆ ಎಂಬುದನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ. ಮಂಡ್ಯ ಜಿಲ್ಲೆಯ ಜರ ಪ್ರೀತಿ, ಅಭಿಮಾನವನ್ನು ದುರುಪಯೋಗ ಪಡಿಸಿಕೊಳ್ಳುವ ಕುಟುಂಬ ನಮ್ಮದಲ್ಲ ಎಂದರು.


ಮಂಡ್ಯ ಜಿಲ್ಲೆಗೂ ನಮ್ಮ ಕುಟುಂಬಕ್ಕೂ ಹಲವು ವರ್ಷಗಳ ಸಂಬಂಧಿವಿದೆ. ಏನು ತೀರ್ಮಾನ ಮಾಡಬೇಕೆಂಬುದನ್ನು ಆ ಜಿಲ್ಲೆಯ ಜನರು ಮಾಡುತ್ತಾರೆ. ಇದು ಪಕ್ಷದ ಮುಖಂಡರು ಮಾಡುವ ತೀರ್ಮಾನವಲ್ಲ. ಜನರ ಮುಂದೆ ಹೋಗುತ್ತೇವೆ. ಜನರೇ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.
ಯಾರ್ಯಾರ ಕೊಡುಗೆ ಏನೇನು ಇದೆ ಎಂಬುದನ್ನು ಜನ ನಿರ್ಧರಿಸುತ್ತಾರೆ. ಹೀಗಾಗಿ ಅದರ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಸಂಸದೆ ಶೋಭಾಕರಂದ್ಲಾಜೆ ಅವರು ಯಶವಂತಪುರ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಮತ್ತೆ ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ. ಇಂತಹ ಹಲವು ನಿದರ್ಶನಗಳಿವೆ. ನಾವು-ನೀವು ತೀರ್ಮಾನ ಮಾಡುವಂತಹ ವಿಚಾರವಲ್ಲ. ಗ್ರಾಮೀಣ ಜನರು ತೀರ್ಮಾನ ಮಾಡುತ್ತಾರೆ.

ರಾಮನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಶಾಸಕಿ ಅನಿತಾಕುಮಾರಸ್ವಾಮಿ ಸ್ಪರ್ಧೆ ಮಾಡುವಾಗಲೂ ಇದೇ ರೀತಿ ವಿರೋಧ ಇದೆ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಚುನಾಯಿತರಾಗಲಿಲ್ಲವೇ ಎಂದು ಪ್ರಶ್ನಿಸಿದರು.
ಮಂಡ್ಯ ಜಿಲ್ಲೆಯ ಕಾಂಗ್ರೆಸ್ ಶಾಸಕರು ಬೆಂಬಲ ನೀಡಲಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಯಾರು ಬೆಂಬಲ ಕೊಡುತ್ತಾರೋ ಅವರಿಗೆ ನನ್ನ ವಿನಂತಿ ಇರುತ್ತದೆ. ಒಂದು ವೇಳೆ ವಿರೋಧ ಮಾಡಿದರೆ ಅವರನ್ನು ಹಿಡಿದಿಟ್ಟುಕೊಳ್ಳಲಾಗುತ್ತದೆಯೇ? ಯಾವ ಕಾಂಗ್ರೆಸ್‍ಮುಖಂಡರ ಜತೆಯೂ ನಾನು ಸಮಾಲೋಚನೆ ಮಾಡಿಲ್ಲ ಎಂದು ಸ್ಪಷ್ಟ ಪಡಿಸಿದರು.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...